“ಪ್ರಪಂಚಾದ್ಯಂತ ಹಾಗೂ ದೇಶದಾದ್ಯಂತ ಒಂದು ಸರ್ಕಾರ ಹೆಣ್ಣುಮಕ್ಕಳಿಗೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಕಲ್ಪಿಸಿರುವ ಏಕೈಕ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಎಂಬ ಹೆಮ್ಮೆ, ಸಾರ್ಥಕತೆ ನಮಗಿದೆ. ಶಕ್ತಿ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರ ಕನಸುಗಳನ್ನು ನನಸಾಗಿಸಿ, ಅವರ ಬದುಕಿಗೆ ಶಕ್ತಿ ತುಂಬಿದೆ” ಎಂದು ತಾಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೋಂದಾದ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ ಸಂಭ್ರಮದ ಹಿನ್ನೆಲೆಯಲ್ಲಿ ಗದಗ ಪಟ್ಟಣದ ಗಾನಯೋಗಿ ಪಂಡಿತ್ ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣದಲ್ಲಿ ಸೋಮವಾರ ಬಸ್ ಗೆ ಪೂಜೆ ಮಾಡಿ, ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಿ ಮಾತನಾಡಿದರು.
“ಮಹಿಳಾ ಸಬಲೀಕರಣದ ಮಹತ್ವಾಕಾಂಕ್ಷೆಯೊಂದಿಗೆ ಪ್ರಾರಂಭಿಸಲಾದ ‘ಶಕ್ತಿ’ ಯೋಜನೆಯ ಫಲಾನುಭವಿಗಳ ಸಂಖ್ಯೆ ಇಂದಿಗೆ 500 ಕೋಟಿ ಗಡಿಯನ್ನು ದಾಟಿ ದಾಖಲೆ ಬರೆದಿದೆ ಇದೊಂದು ಹೊಸ ಮೈಲುಗಲ್ಲಾಗಿದೆ” ಎಂದರು.
“ನಾಡಿನ ಹೆಣ್ಣುಮಕ್ಕಳು ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗೆ ಕುಟುಂಬದ ಯಜಮಾನನ ಮೇಲೆ ಅವಲಂಬಿತರಾಗದೆ ಸ್ವತಂತ್ರ ನಿರ್ಣಯ ಕೈಗೊಂಡು ಸ್ವಾವಲಂಬಿ ಬದುಕಿನೆಡೆಗೆ ಪಯಣಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಇದು ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಗ್ಗೆ ಹೆಮ್ಮೆಯಿದೆ” ಎಂದರು.
“ಗದಗ ತಾಲೂಕು ಸಾರಿಗೆ ಘಟಕದಲ್ಲಿ 8,31,378 ಮಹಿಳಾ ಪ್ರಯಾಣಿಕರು ಪ್ರಯಾಣ ಬೆಳೆಸುವ ಮೂಲಕ ದಾಖಲೆಯ 253.28 ಲಕ್ಷ ಟಿಕೆಟ್ ಮೊತ್ತದ ಪ್ರಯಾಣ ಮಾಡಿದ್ದಾರೆ. ಅದರಂತೆ ಗದಗ ಜಿಲ್ಲೆಯಲ್ಲಿ 10.98 ಲಕ್ಷ ಮಹಿಳೆಯರು ಪ್ರಯಾಣಿಸುವ ಮೂಲಕ 358.89 ಕೋಟಿ ಆದಾಯವಾಗಿದೆ” ಎಂದರು.
“ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ, ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಕೆ ಪಾಟೀಲ ಅವರ ಇಚ್ಚಾಶಕ್ತಿ ಕಾರ್ಯವೈಖರಿಯಿಂದ ಮತ್ತು ಸಹಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳು ಯಶ್ವಸಿಯಾಗಿವೆ” ಎಂದು ಅಶೋಕ ಮಂದಾಲಿ ಹೇಳಿದರು.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಮಾನವ-ಮೊಸಳೆ ಸಂಘರ್ಷಕ್ಕೆ ಅರಣ್ಯ ಇಲಾಖೆಯಿಂದ ಬೇಲಿ ತಂತ್ರ
“ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸದಸ್ಯ ಕೃಷ್ಣಗೌಡ ಹೆಚ್ ಪಾಟೀಲ ಮಾತನಾಡಿ, “ಐದು ಗ್ಯಾರಂಟಿ ಯೋಜನೆಗಳ ಪೈಕಿ ರಾಜ್ಯ ಸರ್ಕಾರ ಮೊದಲು ಜಾರಿಗೊಳಿಸಿದ ‘ಶಕ್ತಿ’ ಯೋಜನೆ ರಾಜ್ಯದ ಎಲ್ಲಾ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿ ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಕಾರಣವಾಗಿದೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಿತಿ ಸದಸ್ಯರುಗಳಾದ ಶಂಭು ಎಸ್ ಕಾಳೆ, ಮೀನಾಕ್ಷಿ ಬೆನಕಣ್ಣನವರ, ಸಾವಿತ್ರಿ ಹೂಗಾರ, ದಯಾನಂದ್ ಪವಾರ, ಸಂಗು ಕರೆಕಲಮಟ್ಟಿ, ಎನ್ ಬಿ ದೇಸಾಯಿ, ಸಂಗಮೇಶ್ ಹಾದಿಮನಿ, ರಮೇಶ್ ಹೊನ್ನಿ ಕಾಯ್ಕರ, ದೇವರಡ್ಡಿ ತಿರ್ಲಾಪುರ್, ಮಲ್ಲಪ್ಪ ಚಿಂಚಲಿ, ಗಣೇಶ್ ಸಿಂಗ್ ಮಿಟಾಡೆ, ಮಲ್ಲಪ್ಪ ಬಾರಕೇರ, ಭಾಷಾ ಮಲ್ಲಸಮುದ್ರ ಹಾಗೂ ಗಣರಾದ ಬಸವರಾಜ ಕಡೆಮನಿ, ಜಾನಕಿ ಮಲ್ಲಾಪುರ,ಶರೀಪ್ ಬಿಳಿಯಲಿ, ವಾಯು ಕರ್ನಾಟಕ ರಸ್ತೆ ಸಾರಿಗೆ ನಿಗಮದ ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಡಿ ದೇವರಾಜ, ವಿಭಾಗೀಯ ಸಂಚಲನಾಧಿಕಾರಿ ಪಿ ವೈ ಮೇತ್ರಿ, ಡಿಪೋ ಮ್ಯಾನೇಜರ ಬಿ ಎಲ್ ಗೆಣ್ಣೂರ, ಕಂಟ್ರೋಲರಳಾದ ವೆಂಕಟೇಶ್ ಜಾದವ, ಶಿವಾನಂದ ಸಂಗಣ್ಣನವರ, ಎಂಬಿ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.