ಅಮೆರಿಕದ ಅಲಾಸ್ಕಾದಲ್ಲಿ ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಸಮುದ್ರದ 36 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಅಲಾಸ್ಕಾ ಪರ್ಯಾಯ ದ್ವೀಪದ ಸ್ಯಾಂಡ್ ಪಾಯಿಂಟ್‌ನಿಂದ 87 ಕಿ.ಮೀ ದೂರದಲ್ಲಿ ಇದರ ಕೇಂದ್ರ ಬಿಂದು ಇತ್ತು ಎಂದು ಎನ್‌ಸಿಎಸ್ ಮಾಹಿತಿ ನೀಡಿದೆ. ಭೂಕಂಪದ ನಂತರ ದಕ್ಷಿಣ ಅಲಾಸ್ಕಾ ಹಾಗೂ ಪರ್ಯಾಯ ದ್ವೀಪದ ಭಾಗದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.
ಸಮುದ್ರದ ಕಡಿಮೆ ಆಳದಲ್ಲಿ ಸಂಭವಿಸಿದ ಭೂಕಂಪ ಇದಾಗಿದ್ದು, ಇಂತಹ ಭೂಕಂಪಗಳು ಹೆಚ್ಚು ಅಪಾಯಕಾರಿಯಾಗಿರುತ್ತವೆ. ಈ ಹಿನ್ನೆಲೆ ಕರಾವಳಿಯ ಜನರು ಎತ್ತರದ ಪ್ರದೇಶಗಳಿಗೆ ಅಥವಾ ಒಳನಾಡಿಗೆ ಸ್ಥಳಾಂತರಗೊಳ್ಳಬೇಕು. ಕಡಲತೀರದಿಂದ ದೂರವಿರಬೇಕು ಎಂದು ಅಮೆರಿಕ ರಾಷ್ಟ್ರೀಯ ಹವಾಮಾನ ಸೇವಾ ಕೇಂದ್ರ ಎಚ್ಚರಿಕೆ ನೀಡಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದೇವನಹಳ್ಳಿ ಐತಿಹಾಸಿಕ ಗೆಲುವಿಗೆ ರೈತರು, ಪ್ರಗತಿಪರ ಸಂಘಟನೆಗಳು ಹಾಗೂ ಸಿದ್ದರಾಮಯ್ಯ ಕಾರಣ
ಅಮೆರಿಕ ರಾಷ್ಟ್ರೀಯ ಹವಾಮಾನ ಸೇವಾ ಕೇಂದ್ರವು ಈ ಎಚ್ಚರಿಕೆ ನೀಡಿದ್ದು, ಕರಾವಳಿಯ ಜನರು ಎತ್ತರದ ಪ್ರದೇಶಗಳಿಗೆ ಅಥವಾ ಒಳನಾಡಿಗೆ ಸ್ಥಳಾಂತರಗೊಳ್ಳಬೇಕು. ಕಡಲತೀರಗಳು ಮತ್ತು ಜಲಮಾರ್ಗಗಳಿಂದ ದೂರವಿರಬೇಕೆಂಬುದನ್ನು ಸೂಚಿಸುತ್ತದೆ.
ಅಮೆರಿಕದಲ್ಲಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಅಲಾಸ್ಕಾದಲ್ಲಿ ಹೆಚ್ಚು ಭೂಕಂಪ ಸಂಭವಿಸುತ್ತವೆ. ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕಿಂತ ಹೆಚ್ಚು ಜನರು 7 ತೀವ್ರತೆಯ ಭೂಕಂಪ ಸಂಭವಿಸಬಹುದಾದ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ.
