2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಸಂಬಂಧಿಸಿ ‘ಕರ್ನಾಟಕ ರೈತ ಸುರಕ್ಷಾ – ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ’ಯನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದು, ಯೋಜನೆಯಡಿ ಬೆಳೆವಿಮೆಗೆ ನೋಂದಾಯಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಾರಿ ಸೋಯಾಬಿನ್ ಹಾಗೂ ಮಸುಕಿನ ಜೋಳ ಪ್ರಮುಖ ಮುಂಗಾರು ಬೆಳೆಗಳಾಗಿ ಪಂಚಾಯತ್ ಮಟ್ಟದಲ್ಲಿ ಅಧಿಸೂಚಿತವಾಗಿವೆ. ಇತರೆ ಬೆಳೆಗಳು ಹೋಬಳಿ ಮಟ್ಟದ ಅಧಿಸೂಚನೆಯಡಿ ವಿಮೆಗೊಳಪಟ್ಟಿವೆ.
ರೈತರು ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಗ್ರಾಮ ಆಡಳಿತಾಧಿಕಾರಿಗಳ ಕಚೇರಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.
“ನಿಗದಿತ ದಿನಾಂಕದೊಳಗೆ ನೋಂದಾಯಿಸಿ ಯೋಜನೆಯ ಸದುಪಯೋಗ ಪಡೆಯಿರಿ,” ಎಂದು ಸಹಾಯಕ ಕೃಷಿ ನಿರ್ದೇಶಕ ಬಸವರಾಜ ದಳವಾಯಿ ತಿಳಿಸಿದ್ದಾರೆ.