ಆರ್.ಸಿ.ಬಿ ತಂಡದ ವಿಜಯೋತ್ಸವ ಸಮಾರಂಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ರವರ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದ ವರದಿಯ ಮೇಲೆ ಕ್ರಮವಹಿಸಲು ಸಚಿವ ಸಂಪುಟ ನಿರ್ಧರಿಸಿದೆ.
ಆರ್ ಸಿ ಬಿ ವಿರುದ್ದ , ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ದವೂ ಕ್ರಿಮಿನಲ್ ಮೊಕದ್ದಮೆ ದಾಖಲಿಗೆ ಸರ್ಕಾರ ನಿರ್ಧಾರ ಮಾಡಿದೆ. ಸಂಬಂಧಿಸಿದ ಪೊಲಿಸ್ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ವರದಿಯಲ್ಲೂ ಶಿಫಾರಸು ಮಾಡಲಾಗಿದೆ. ಪೊಲಿಸ್ ಅಧಿಕಾರಿಗಳ ವಿರುದ್ದವು ಕ್ರಿಮಿನಲ್ ಮೊಕದ್ದಮೆ ದಾಖಲು ಸಾಧ್ಯತೆ ಇದೆ. ಇದಕ್ಕೆ ಸಂಬಂಧಿಸಿ ಮತ್ತೆ ಮುಂದಿನ ಕ್ಯಾಬಿನೆಟ್ ನಲ್ಲಿ ಅಂತಿಮ ತೀರ್ಮಾನ ಪ್ರಕಟವಾಗಲಿದೆ.
ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು- ವಿಜಯಪುರ ಒಳಗೊಂಡಂತೆ ಉತ್ತರ ಕರ್ನಾಟಕ ಪ್ರವಾಸಿ ವೃತ್ತವನ್ನು ಅಭಿವೃದ್ಧಿಪಡಿಸಲು ಅನುಬಂಧದಲ್ಲಿರುವ ಏಳು ಯೋಜನೆಗಳನ್ನು ಇಲಾಖೆಯ ಹೆಸರಿನಲ್ಲಿ ಹೊಂದಿರುವ 78.26 ಎಕರೆ ಜಮೀನಿನಲ್ಲಿ ರೂ.166.22 ಕೋಟಿಗಳ ಅಂದಾಜು ವೆಚ್ಚದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ನಿರ್ವಹಣೆ ಮತ್ತು ವರ್ಗಾವಣೆ (DBFOR) ಮಾದರಿಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮ (ಕೆ.ಟಿ.ಐ.ಎಲ್) ಬೆಂಗಳೂರು ಇವರ ಮೂಲಕ ಕೈಗೊಳ್ಳಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-III- ಭೂಸ್ವಾಧೀನಕ್ಕಾಗಿ ಏಕರೂಪ ದರಗಳನ್ನು ಅಂತಿಮಗೊಳಿಸಲು ಹಾಗೂ ಅಂತಿಮ ಯೋಜನಾ ವೆಚ್ಚವನ್ನು ಪರಿಶೀಲಿಸಲು ಮತ್ತು ಶಿಫಾರಸು ಮತ್ತು ಶಿಫಾರಸು ಮಾಡಲು ಸಚಿವ ಸಂಪುಟ ಉಪ ಸಮಿತಿಗೆ ವಹಿಸಲು ನಿರ್ಧರಿಸಲಾಗಿದೆ.
ಹೇಮಾವತಿ ಯೋಜನೆಯಡಿಯಲ್ಲಿನ ನಾಗಮಂಗಲ ಶಾಖಾ ನಾಲೆಯ ಸರಪಳಿ ಅಭಿವೃದ್ಧಿಪಡಿಸುವ ರೂ.560.00 ಕೋಟಿಗಳ ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂಸ್ವಾಧೀನಪಡಿಸಿಕೊಂಡಿದ್ದ ಜಮೀನಗಳನ್ನು ಭೂಸ್ವಾಧೀನ ಕಾಯ್ದೆ 1894ರ ಕಲಂ48(1)ರಡಿ ಭೂಸ್ವಾಧೀನದಿಂದ ಕೈಬಿಟ್ಟಿರುವ 29 ಪ್ರಕರಣಗಳಲ್ಲಿ (ಪಟ್ಟಿಯನ್ನು ಅನುಬಂಧ-2 ರಲ್ಲಿ ಒದಗಿಸಲಾಗಿದೆ), ಸಂಬಂಧಪಟ್ಟ ಎಲ್ಲ ಬಾಧಿತ ವ್ಯಕ್ತಿಗಳಿಗೆ ನೋಟೀಸ್ ನೀಡಿ. ವಿವರಣೆ ಪಡೆದು, ನಿಯಮಬಾಹಿರವಾಗಿ ಭೂಸ್ವಾಧೀನದಿಂದ ಕೈಬಿಟ್ಟಿರುವ ಅಧಿಸೂಚನೆಗಳನ್ನು ಹಿಂಪಡೆಯಲು ಹಾಗೂ ಇದಕ್ಕೆ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.
ಕುನ್ಹಾ ವರದಿ ಕ್ಯಾಬಿನೆಟ್ ಗೆ ಸಲ್ಲಿಕೆಯಾಗಿದ್ದು, ಅದರ ಬಗ್ಗೆ ಅಧ್ಯಯನ ಮಾಡಿ ಚರ್ಚಿಸಲು ಮುಂದಿನ ಕ್ಯಾಬಿನೆಟ್ ಗೆ ತರಲು ನಿರ್ಧಾರ ಮಾಡಲಾಗಿದೆ. ಶಿಫಾರಸುಗಳನ್ನು ಅನುಷ್ಟಾನಕ್ಕೆ ತರುವ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗಿದೆ.