ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ಗುರುತಿಸಲಾಗಿದೆ. ನಿನ್ನೆ ಬೆಳ್ಳಗೆ 2 ಕಾಡಾನೆಗಳು ಪ್ಲಾಂಟೇಶನ್‌ನಲ್ಲಿ ಪ್ರತ್ಯಕ್ಷವಾಗಿದ್ದು, ಅವನ್ನು ಓಡಿಸಲು ಬಾಲಕೃಷ್ಣ ಮುಂದಾಗಿದ್ದಾರೆ. ತಿರುಗಿ ಬಿದ್ದ ಆನೆ ಅವರ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆ ಹಾವಳಿಗೆ ಕಡಿವಾಣ ಹಾಕಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು | ಒಬ್ಬಂಟಿ ಮಹಿಳೆ ಕೊಲೆ ಪ್ರಕರಣ: ಆರೋಪಿಯ ಬಂಧನ
