ಮಲ್ಲಿಕಾರ್ಜುನ ಖರ್ಗೆ ಅವರ ಬಣ್ಣದ ಕುರಿತು ಅವಹೇಳನ; ಮುಖ್ಯಮಂತ್ರಿ ಚಂದ್ರು ಖಂಡನೆ

Date:

Advertisements
  • ಅರಗ ಜ್ಞಾನೇಂದ್ರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು
  • ಇದು ಉತ್ತರ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ

ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪ, ಮುಖಭಾವಗಳ ಬಗ್ಗೆ ವ್ಯಂಗ್ಯ ಮಾಡಿರುವ ಅರಗ ಜ್ಞಾನೇಂದ್ರ ಅವರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

“ಕುಲ ಕುಲವೆಂದು ಹೊಡೆದಾಡಬೇಡಿ ಎಂಬ ಕನಕದಾಸರ ನುಡಿಯಂತೆ ನಾವೆಲ್ಲರೂ ದೇಶದ ಅಸ್ಪೃಶ್ಯತೆಯನ್ನು ನಿವಾರಿಸುವ, ತೊಡೆದು ಹಾಕುವ , ಸರ್ವರಿಗೂ ಸಮ ಪಾಲು-ಸಮ ಬಾಳು ನೀಡುವ  ಕಾಲಘಟ್ಟದಲ್ಲಿ  ಇರುವಾಗ, ಮನಸ್ಮೃತಿಯ ಹರಿಕಾರರಂತೆ ಅರಗ ಜ್ಞಾನೇಂದ್ರ ಹೇಳಿಕೆ ಇವರ ಸಂಸ್ಕೃತಿಯನ್ನು ತೋರಿಸುತ್ತದೆ.  ನಮ್ಮ ಸಂವಿಧಾನಕ್ಕೆ, ರಾಷ್ಟ್ರದ ದಲಿತ ಸಮುದಾಯಗಳಿಗೆ ಹಾಗೂ ಉತ್ತರ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ. ಯಾವುದೇ ಕಾರಣಕ್ಕೂ ಇವರ ಹೇಳಿಕೆ ಸಹಿಸಲು ಸಾಧ್ಯವಿಲ್ಲ ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿವಿ ಪುರಂನ ‘ತಿಂಡಿ ಬೀದಿ’ ರಸ್ತೆ ಅಭಿವೃದ್ಧಿ

Advertisements

“ಕಾಂಗ್ರೆಸ್ ಸರ್ಕಾರವು ಇವರ ಮೇಲೆ  ಮೊಕದ್ದಮೆಯನ್ನು ಹಾಕಿ, ಇವರ ವಿರುದ್ಧ ಎಫ್ಐಆರ್ ಮಾಡಬೇಕಿದೆ. ಇವರ ಶಾಸಕತ್ವವನ್ನು ಅನೂರ್ಜಿತಗೊಳಿಸುವಂತಹ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಂಡಲ್ಲಿ ಮುಂದಿನ ದಿನಮಾನಗಳಲ್ಲಿ ಯಾರೂ ದಲಿತ ವರ್ಗಗಳನ್ನು ತುಚ್ಚವಾಗಿ ನೋಡುವುದು, ಮಾತನಾಡುವುದು ತಪ್ಪುತ್ತದೆ. ಸರ್ಕಾರ ಈ ಕೂಡಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಬೇಕೆಂದು”  ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X