ನವೆಂಬರ್‌ ವೇಳೆಗೆ ಡಿಕೆಶಿ ಸಿಎಂ ಆಗ್ತಾರೆ: ಮಾಜಿ ಸಚಿವ ಜನಾರ್ಧನ ರೆಡ್ಡಿ

Date:

Advertisements

ಇದೇ ವರ್ಷ ನವೆಂಬರ್‌ ತಿಂಗಳ ಒಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಕುರ್ಚಿ ಬಿಟ್ಟು ಕೊಡಲಿದ್ದಾರೆ. ಇಲ್ಲದಿದ್ದರೆ ಡಿಕೆಶಿಯವರು ಬಲವಂತವಾಗಿ ಕುರ್ಚಿ ಕಸಿದುಕೊಳ್ಳುತ್ತಾರೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭವಿಷ್ಯ ನುಡಿದರು.

ಕಡಬ ತಾಲೂಕಿನ ಆರೆಲ್ಲಡಿ ಉಳ್ಳಾಕು, ಕೆಡೆಂಜೊಡಿತ್ತಾಯ ದೇವಸ್ಥಾನದಲ್ಲಿ ನೂತನ ಸಭಾಭವನದ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರ ಮನೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, “ನನಗೆ ಸಿಕ್ಕಿರುವ ಮಾಹಿತಿಯಂತೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯೆ 50-50 ಅಧಿಕಾರ ಹಂಚಿಕೆಯ ಒಪ್ಪಂದವಾಗಿದೆ. ಇತ್ತ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದು ಹೇಳಿದ್ದಾರೆ. ಇದರಿಂದ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವುದಿಲ್ಲ ಎಂದು ತಿಳಿದು, ಡಿಕೆಶಿ ಈಗ ತಮ್ಮ ಹಕ್ಕು ಕೇಳುವುದಕ್ಕೆ ಪ್ರಾರಂಭಿಸಿದ್ದಾರೆ. ನವೆಂಬರ್‌ ತಿಂಗಳ ಒಳಗೆ ಈ ವಿದ್ಯಮಾನ ಮುಗಿಯಲಿದೆ. ಒಂದು ವೇಳೆ ಸಿದ್ಧರಾಮಯ್ಯ ಸಿಎಂ ಕುರ್ಚಿ ನೀಡದಿದ್ದರೆ ಬಲವಂತವಾಗಿ ಡಿಕೆಶಿ ಕುರ್ಚಿಯನ್ನು ಕಸಿದುಕೊಳ್ಳಲಿದ್ದಾರೆ” ಎಂದರು.

ಇದನ್ನೂ ಓದಿ: ಮಂಗಳೂರು | ಒಬ್ಬಂಟಿ ಮಹಿಳೆ ಕೊಲೆ ಪ್ರಕರಣ: ಆರೋಪಿಯ ಬಂಧನ

“ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಅನುದಾನ ಇರುವುದಕ್ಕೆ ಮಾತ್ರ ಆ ಭಾಗದ ಶಾಸಕರಿಗೆ ಒಂದಷ್ಟು ಅನುದಾನ ಸಿಗುತ್ತದೆ. ಆದರೆ ಉಳಿದ ಭಾಗದ ಶಾಸಕರಿಗೆ ಯಾವುದೇ ಅನುದಾನ ಸಿಗುತ್ತಿಲ್ಲ. ಅವರಿಂದ ಯಾವುದೇ ಅಭಿವೃದ್ದಿ ಮಾಡಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್‌ ಸರ್ಕಾರ 5 ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯ ಜನರಿಗೆ ಬೆಲೆ ಏರಿಕೆಯ ಶಿಕ್ಷೆ ನೀಡುತ್ತಿದೆ. ಮಹಿಳೆಯರಿಗೆ ಗೃಹಲಕ್ಷ್ಮಿ ದುಡ್ಡು ಕೊಡದೆ ನಾಲ್ಕು ತಿಂಗಳಾಗಿವೆ. ಯಾವುದಾದರೂ ಚುನಾವಣೆ ಬಂದರೆ ಒಂದು ಕಂತು ಹಾಕುತ್ತಾರೆ. ಹೀಗಾಗಿ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಳ್ಳುತ್ತ ಬರುತ್ತಿದೆ” ಎಂದು ಆರೋಪಿಸಿದರು.

ಕಾಂಗ್ರೆಸ್‌ ಸರ್ಕಾರದ ದುರಾಡಳಿತ ನೋಡಿರುವ ರಾಜ್ಯದ ಜನತೆ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುತ್ತಾರೆ. ಮುಂದಿನ ಬಾರಿ ನಾವು ಅಧಿಕಾರಕ್ಕೆ ಬರುವುದು ಖಚಿತ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ ಜಂಬೂಸವಾರಿ : ಸಾಂಸ್ಕೃತಿಕ ವೈಭವ

 ತುಮಕೂರು ದಸರಾ ಉತ್ಸವದ ಅಂಗವಾಗಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

ಕೊಪ್ಪಳ | ಉದಯೋನ್ಮುಖ ಕವಿಗಳು ಕವಿತೆ ರಚಿಸಲು ಆದ್ಯತೆ ನೀಡಬೇಕು: ವಿ. ಕುಲಪತಿ ಮಲ್ಲಿಕಾ ಘಂಟಿ

'ಸಾಹಿತ್ಯದ ಕೆಲಸ ಸ್ಥಗಿತಗೊಂಡ ಜನರ ಬದುಕನ್ನು ಚಲನಶೀಲನಗೊಳಿಸುವಂತದ್ದಾಗಿದ್ದು, ಈ ದಿಸೆಯಲ್ಲಿ ಉದಯೋನ್ಮುಖ...

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ಮೈಸೂರು ದಸರಾ | ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ...

Download Eedina App Android / iOS

X