ಚಿತ್ರದುರ್ಗ | ಕಲುಷಿತ ನೀರು ಸೇವನೆ; ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹ

Date:

Advertisements

ಚಿತ್ರದುರ್ಗ ನಗರದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಈವರೆಗೆ 3 ಮಂದಿ ಮೃತಪಟ್ಟಿರುವ ಘಟನೆ ಕುರಿತು ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ನೀಡಿ ಮರಣ ಹೊಂದಿದವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು. ಘಟನೆಗೆ ಕಾರಣರಾದವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನಗರದ ಭಾರತೀಯ ಜನತಾಪಾರ್ಟಿ ವಿಧಾನ ಪರಿಷತ್ ಸದಸ್ಯ ನವೀನ್ ಮಾತನಾಡಿ “ಕಲುಷಿತ ನೀರು ಸೇವಿಸಿ ಈವರೆಗೆ 3 ಮಂದಿ ಮೃತಪಟ್ಟಿದ್ದು, ಸುಮಾರು 90 ಮಂದಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 15 ಮಂದಿ ತುರ್ತು ನಿಗಾಘಟಕದಲ್ಲಿ ಇದ್ದಾರೆ. ಘಟನೆ ನಡೆದು ಮೂರು ದಿನ ಆಗುತ್ತಿದೆ. ಸ್ಥಳೀಯ ಶಾಸಕರು ಸೌಜನ್ಯಕ್ಕಾದರು ಘಟನಾ ಸ್ಥಳಕ್ಕೆ ಭೇಟಿ ನೀಡದಿರುವುದು ಈ ಕ್ಷೇತ್ರದ ದುರ್ದೈವ ಸಂಗತಿ” ಎಂದರು.

ಘಟನೆಯ ಬಗ್ಗೆ ಜಿಲ್ಲಾಡಳಿತ ಸೂಕ್ತವಾದ ತನಿಖೆ ನಡೆಸುವುದರ ಮೂಲಕ ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಮಾಡಿ ಅವರಿಗೆ ಸೂಕ್ತ ಶಿಕ್ಷೆ ಕೊಡಿಸಬೇಕು. ಅದಕ್ಕೂ ಮುನ್ನಾ ಇದಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ನಗರಸಭೆ ಅಧಿಕಾರಿಗಳನ್ನು ಅಮಾನತು ಮಾಡಬೇಕು. ತದನಂತರ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಬೇಕು” ಎಂದು ಆಗ್ರಹಿಸಿದರು.

Advertisements

“ಸರ್ಕಾರ ಜನರ ಬದುಕಿನ ಜೊತೆಯಲ್ಲಿ ಚಲ್ಲಾಟ ಆಡುತ್ತಿರುವುದು ನಿರ್ಲಜ್ಜವಾಗಿದೆ. ನಮ್ಮ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ನಿಂತು ಹೋಗಿವೆ. ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಧಿಕಾರಿಗಳು ಗಮನ ಹರಿಸುತ್ತಿಲ್ಲ. ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರದಲ್ಲಿ ಕುಡಿಯವ ನೀರಿನೊಂದಿಗೆ ಕೊಳಚೆ ನೀರು ಸೇರಿದ್ದು, ಹಲವಾರು ಜನತೆಯ ಕಿಡ್ನಿ ಹಾಳಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿ ತನಿಖೆ ನಡೆಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

“ನಾಗಸಮುದ್ರದಲ್ಲಿಯೂ ಇದೇ ರೀತಿ ಅಸ್ವಸ್ಥರಾಗಿ ಅವರನ್ನು ಚಿಕಿತ್ಸೆಗಾಗಿ ಬಳ್ಳಾರಿಗೆ ಕಳುಹಿಸಲಾಯಿತು. ಈಗ ಚಿತ್ರದುರ್ಗದಲ್ಲಿ ಆಗಿದೆ. 70ಕ್ಕೂ ಅಧಿಕ ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಇದ್ದಾರೆ. ಇದರಲ್ಲಿ 9 ಮಂದಿ ಸ್ಥಿತಿ ಚಿಂತಾಜನಕವಾಗಿದೆ. ಸರ್ಕಾರದಿಂದ ಗ್ರಾಮೀಣ ಭಾಗದ ಜನತೆಗೆ ಶುದ್ದ ಕುಡಿಯುವ ನೀರು ನೀಡದಿರುವುದು ದುರಂತವೇ ಸರಿ. ಈ ಬಗ್ಗೆ ಅಧಿಕಾರಿಗಳು, ಮಂತ್ರಿಗಳು, ಮುಖ್ಯಮಂತ್ರಿ ಏನು ಮಾಡುತ್ತಿದ್ದಾರೆ? ಈ ಘಟನೆಯ ಬಗ್ಗೆ ಪೂರ್ಣ ಪ್ರಮಾಣದಲ್ಲಿ ತನಿಖೆಯಾಗಬೇಕು. ತಪ್ಪಿತಸ್ಥರಿಗೆ
ಶಿಕ್ಷೆಯಾಗಬೇಕು. ಇದರ ಹಿಂದೆ ಯಾವುದೇ ರೀತಿಯ ಷಡ್ಯಂತ್ರ ಇದ್ದರೆ ಅದನ್ನು ಬಯಲು ಮಾಡಬೇಕು” ಎಂದು ಆಗ್ರಹಿಸಿದರು.

ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮುಖಂಡರಾದ ಎ.ಮುರಳಿ, ಜಯಪಾಲಯ್ಯ, ನವೀನ್ ಚಾಲುಕ್ಯ, ವಕ್ತಾರರಾದ ದಗ್ಗೆ ಶಿವಪ್ರಕಾಶ್, ನಗರಸಭಾ ಮಾಜಿ ಸದಸ್ಯ ರವಿಕುಮಾರ್, ನಗರಾಭೀವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯೆ ರೇಖಾ, ಮೋಹನ್, ಸಂಪತ್‌, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರೆಡ್ಡಿ ಸೇರಿದಂತೆ ಇತರರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X