ಶಿವಮೊಗ್ಗ, ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್ ಗುರುವಾರ ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕಿಮ್ಮನೆ ರತ್ನಾಕರ್ ಅವರಿಗೆ ಆತ್ಮೀಯವಾಗಿ ಶುಭಾಶಯ ಕೋರಿದರು.ಈ ಕುರಿತು ಕೇಕ್ ಕತ್ತರಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವ ಮಧು ಬಂಗಾರಪ್ಪ, “ಮಾಜಿ ಸಚಿವರು ಹಾಗೂ ಆತ್ಮೀಯರಾದ ಕಿಮ್ಮನೆ ರತ್ನಾಕರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು.
ಭಗವಂತ ಅವರಿಗೆ ಆಯುರಾರೋಗ್ಯ ನೀಡಿ, ಸಕಲ ಇಷ್ಟಾರ್ಥಗಳನ್ನು ಈಡೇರಿಸಲಿ” ಎಂದು ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್, ಕಲಗೋಡು ರತ್ನಾಕರ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದು, ಕಿಮ್ಮನೆ ರತ್ನಾಕರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.