ಉಡುಪಿ | ನಕಲಿ ಆಧಾರ್ ಕಾರ್ಡ್ ಹೊಂದಿದ್ದಲ್ಲಿ ಕಾನೂನು ಕ್ರಮ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Date:

Advertisements

ಉಡುಪಿ ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್‌ಗೆ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ತಪ್ಪದೇ ಆಧಾರ್ ಲಿಂಗ್ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಂದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾರ್ನ್ಪರೆನ್ಸ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಈವರೆಗೆ 14,11,209 ಜನರು ಆಧಾರ್ ಕಾರ್ಡ್ ಅನ್ನು ಹೊಂದಿದ್ದು, ಅವರಲ್ಲಿ 13,42,275 ಜನರು ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿಕೊಂಡು ಶೇ. 68.93 ರಷ್ಟು ಆಗಿದೆ. ಬಾಕಿ ಉಳಿದ ಪ್ರತಿಯೊಬ್ಬರೂ ತಮ್ಮ ಆಧಾರ್ ಕಾರ್ಡ್ಗೆ ಮೊಬೈಲ್ ಸಂಖ್ಯೆಯನ್ನು ಶೀಘ್ರದಲ್ಲಿಯೇ ಅಪ್‌ಡೇಟ್ ಮಾಡಿಸಿಕೊಳ್ಳಬೇಕು ಎಂದರು.

Advertisements

ಜಿಲ್ಲೆಯಲ್ಲಿರುವ 15 ವರ್ಷ ಮೇಲ್ಪಟ್ಟ ಆಧಾರ್ ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳು ಆಧಾರ್ ಸೆಂಟರ್‌ಗಳಿಗೆ ತೆರಳಿ ತಮ್ಮ ಬೆರಳಚ್ಚು ನೀಡಿ, ಆಧಾರ್ ಕಾರ್ಡ್ಗಳನ್ನು ಸಕ್ರೀಯಗೊಳಿಸಿಕೊಳ್ಳಬೇಕು. ಇಲ್ಲವಾದಲ್ಲಿ ಆಧಾರ್ ನಿಷ್ಕಿೃಯಗೊಳ್ಳಲಿದ್ದು, ಪ್ರಸ್ತುತ 41,115 ಯುವಜನರ ಬಯೋಮೆಟ್ರಿಕ್ ನೀಡುವುದು ಬಾಕಿ ಇದೆ ಇದರಿಂದ ಭವಿಷ್ಯದಲ್ಲಿ ಯಾವುದೇ ಪರೀಕ್ಷೆಗಳನ್ನು ತೆಗೆದುಕೊಳ್ಳಲು ತೊಂದರೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಬಯೋಮೆಟ್ರಿಕ್ ನೀಡಿ, ಅಪ್‌ಡೇಟ್ ಮಾಡಿಕೊಳ್ಳಬೇಕೆಂದರು.

ಅಂಗನವಾಡಿ ಕೇಂದ್ರಗಳಿಗೆ ಪೋಷಣ್ ಟ್ಯಂಕರ್ 45,832 ಮಕ್ಕಳು ದಾಖಲಾಗಿದ್ದು, ಅವರಲ್ಲಿ 33,425 ಮಕ್ಕಳಿಗೆ ಆಧಾರ್ ಕಾರ್ಡ್ ಹೊಂದಿದ್ದಾರೆ. ಬಾಕಿ ಉಳೀದ 11,947 ಮಕ್ಕಳಿಗೂ ಆಧಾರ್ ಕಾರ್ಡ್ ಹೊಂದುವುದು ಅವಶ್ಯ. ತಮ್ಮ ಹತ್ತಿರದ ಅಂಚೆ ಕಚೇರಿಗಳಲ್ಲಿ ಆಧಾರ್ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಪೋಷಕರು ತಮ್ಮ ಮಕ್ಕಳ ಆಧಾರ್ ನೋಂದಣಿಯನ್ನು ಮಾಡಿಸಬೇಕು ಎಂದರು.

ಆಧಾರ್ ಕಾರ್ಡ್ ಹೊಂದಿರುವರು ತಮ್ಮ ಆಧಾರ್ ಬಗ್ಗೆ ಮಾಹಿತಿ ಪರಿಶೀಲಿಸಲು ಇಚ್ಛಿಸಿದ್ದಲ್ಲಿ ಪ್ಲೇಸ್ಟೋರ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ನೋಡಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದರು.

ಹೊರರಾಜ್ಯ ಹಾಗೂ ವಿದೇಶಗಳಿಂದ ಬಂದಿರುವ ಜನರು ಸಹ ಸುಳ್ಳು ದಾಖಲೆ ಪತ್ರಗಳನ್ನು ನೀಡಿ ಆಧಾರ್ ನೋಂದಣಿಗೆ ಮುಂದಾಗುವ ಸಾಧ್ಯತೆಗಳಿರುತ್ತದೆ. ಈ ಬಗ್ಗೆ ಎಚ್ಚರ ವಹಿಸಬೇಕು. ಕೆಲವರು ನಕಲಿ ಆಧಾರ್ ಪ್ರತಿಗಳನ್ನು ಹೊಂದಿರುವ ಬಗ್ಗೆ ಕ್ಯೂ ಆರ್ ಕೋಡ್ ಅನ್ನು ಪರಿಶೀಲಿಸುವುದರೊಂದಿಗೆ ಆಧಾರ್ ಕಾರ್ಡ್ನ ನೈಜತೆಯನ್ನು ಪರಿಶೀಲಿಸಬೇಕು ಎಂದ ಅವರು, ಸುಳ್ಳು ದಾಖಲೆಗಳನ್ನು ನೀಡಿ ಆಧಾರ್ ಕಾರ್ಡ್ ಪಡೆಯಲು ಮುಂದಾಗುವುದು ಹಾಗೂ ನಕಲಿ ಆಧಾರ್ ಕಾರ್ಡ್ಗಳನ್ನು ಹೊಂದಿದ್ದಲ್ಲಿ ಅಂತಹವರ ಮೇಲೆ ಪೊಲೀಸ್ ಇಲಾಖೆಯು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಜನನ ಪ್ರಮಾಣ ಪತ್ರ ಹಾಗೂ ಶಾಲೆಯ ದಾಖಲೆಗಳಲ್ಲಿ ಹೆಸರು ಬದಲಾವಣೆ ಹಿನ್ನೆಲೆ ಕೆಲವು ವಿದ್ಯಾರ್ಥಿಗಳು, ವೃದ್ಧಾಶ್ರಮದಲ್ಲಿರುವ ಹಿರಿಯ ನಾಗರಿಕರು ಹಾಗೂ ಹಾಸಿಗೆ ಹಿಡಿದ ಕೆಲವು ಅಂಗವಿಕರುಗಳು ಆಧಾರ್ ಕಾರ್ಡ್ ಅನ್ನು ಮಾಡಿಸಿಕೊಳ್ಳಲು ಸಮಸ್ಯೆ ಉಂಟಾಗುತ್ತಿದೆ. ಇವುಗಳನ್ನು ಕೂಡಲೇ ಬಗೆಹರಿಸಿ ಅವರಿಗೂ ಸಹ ಆಧಾರ್ ಕಾರ್ಡ್ ಪಡೆಯಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯು.ಐ.ಡಿ.ಎ.ಐ ಉಪನಿರ್ದೇಶಕ ಗುಲ್ಷನ್ ಕುಮಾರ್ ಸಿಂಗ್, ಅಸಿಸ್ಟೆಂಟ್ ಮ್ಯಾನೆಜರ್ ಮೊಹಮ್ಮದ್ ಮೂಸಾಬ್ ವಿಡಿಯೋ ಕಾನ್ಫ್ರೆನ್ಸ್ ಮೂಲಕ ಭಾಗವಹಿಸಿದ್ದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಡಿಡಿಪಿಐ ಮಾರುತಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X