ದಕ್ಷಿಣ ಕನ್ನಡ | ನಿಷೇಧಿತ ಮಾದಕ ವಸ್ತು ʼಚರಸ್ʼ ಸಾಗಾಟ; ಕಾರು ಸಹಿತ ಆರೋಪಿ ಬಂಧನ

Date:

Advertisements

ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಸಾಗಾಟ ಮಾಡುತ್ತಿರುವುದನ್ನು ಭೇದಿಸಿರುವ ಬಜಪೆ ಠಾಣಾ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

“ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಸುರತ್ಕಲ್ ಸೂರಿಂಜೆಯ ಕಿನ್ನಿಗುಡ್ಡೆ ನಿವಾಸಿ ಅಬ್ದುಲ್ ಅಝೀಝ್(34) ಬಂಧಿತ ಆರೋಪಿ. ಈತನಿಂದ 230.4 ಗ್ರಾಂ ತೂಕದ ಚರಸ್ ಹಾಗೂ ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ನಿಂಗ್ ಸ್ಟಾರ್ ಶಾಲೆಯ ಬಳಿ ಆಗಸ್ಟ್‌ 01ರಂದು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್ ಪ್ಲೇಟ್‌ ಇಲ್ಲದ ಕಂದು ಬಣ್ಣದ ಸ್ವಿಫ್ಟ್ ಕಾರನ್ನು ನಿಲ್ಲಿಸಲು ಚಾಲಕನಿಗೆ ಸೂಚನೆ ನೀಡಿದಾಗ ಕಾರು ಚಾಲಕನು ಕಾರನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದಾನೆ. ಕಾರನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಚಾಲಕ ಅಬ್ದುಲ್ ಅಝೀಝ್ ಎಂಬಾತ 230.4 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತು ʼಚರಸ್‌ʼ ಸಾಗಿಸುತ್ತಿದ್ದುದು ಕಂಡುಬಂದಿದೆ.

Advertisements
ಚರಸ್‌ ಸಾಗಾಟ
ನಿಷೇಧಿತ ಮಾದಕ ವಸ್ತು ಚರಸ್‌

ನಿಷೇಧಿತ ಮಾದಕ ವಸ್ತುವನ್ನು ಕಾರಿನ ಡ್ಯಾಶ್ ಬೋರ್ಡ್‌ನಲ್ಲಿಟ್ಟು ಅಕ್ರಮವಾಗಿ ಸಾಗಿಸುತ್ತಿರುವುದನ್ನು ಕಂಡು ಕಾರು ಹಾಗೂ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದು, ಕಾರಿನಲ್ಲಿದ್ದ ಇತರ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕಲುಷಿತ ನೀರು ಸೇವನೆ; ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹ

ಈ ಪ್ರಕರಣದಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಐಪಿಎಸ್‌ ಅವರ ಮಾರ್ಗದರ್ಶನದಂತೆ, ಡಿಸಿಪಿ ಅಂಶು ಕುಮಾರ್, ಡಿಸಿಪಿ ದಿನೇಶ್ ಕುಮಾರ್ ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್, ಬಜಪೆ ಠಾಣಾ ಪಿಐ ಪ್ರಕಾಶ್ ನೇತ್ರತ್ವದ ತಂಡ ಕಾರ್ಯಚರಣೆ ನಡೆಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X