ಉಡುಪಿ | ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ

Date:

Advertisements
  • ಜಿಲ್ಲೆಯಲ್ಲಿ ಹೆಚ್ಚಾದ ನಕಲಿ ಪತ್ರಕರ್ತರ ಹಾವಳಿ
  • ಪತ್ರಕರ್ತರ ಹೆಸರೇಳಿಕೊಂಡು ಸುಲಿಗೆ ಆರೋಪ

ಉಡುಪಿ ಜಿಲ್ಲೆಯಾದ್ಯಂತ ಹಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚೀಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಮಾತನಾಡಿ, “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಇದರ ಅಧೀನ ಸಂಸ್ಥೆಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುಮಾರು 170 ಮಂದಿ ಸದಸ್ಯರು ಪ್ರಾಮಾಣಿಕರಾಗಿ ಕರ್ತವ್ಯ ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಆದರೆ, ಇತ್ತೀಚೆಗೆ ಜಿಲ್ಲೆಯಲ್ಲಿ ಕೆಲವು ವ್ಯಕ್ತಿಗಳು ಪತ್ರಕರ್ತರ ಸಂಘ ಮತ್ತು ಪತ್ರಕರ್ತರ ಹೆಸರು ಹೇಳಿ ಹಣ ಸಂಗ್ರಹಿಸುವ, ವಸೂಲಿ ಮಾಡುವ ಹಾಗೂ ಬೆದರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿವುದು ಸಂಘದ ಗಮನಕ್ಕೆ ಬಂದಿದೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದರು.

“ಯಾವುದೇ ಪತ್ರಿಕೆ ಹಾಗೂ ಟಿವಿಯಲ್ಲಿ ಸುದ್ದಿ ಪ್ರಕಟಿಸಲು ಅಥವಾ ಪ್ರಸಾರ ಮಾಡಲು ಹಣ ನೀಡಬೇಕಾದ ಅಗತ್ಯ ಇರುವುದಿಲ್ಲ. ಆದರೂ ಕೆಲವು ನಕಲಿ ಪತ್ರಕರ್ತರು ಸುದ್ದಿಯ ಹೆಸರಿನಲ್ಲಿ ಹಣ ವಸೂಲಿ ಮಾಡುವ ದಂಧೆಗೆ ಇಳಿದಿರುವ ಬಗ್ಗೆ ಸಂಘಕ್ಕೆ ದೂರುಗಳು ಬಂದಿವೆ. ಈ ರೀತಿ ಪತ್ರಕರ್ತರ ಹೆಸರಿನಲ್ಲಿ ಹಣ ವಸೂಲಿಗೆ ಇಳಿಯುವ ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು” ಎಂದು ಆಗ್ರಹಿಸಿದ್ದಾರೆ.

Advertisements

“ಪ್ರಸ್ತುತ ಚುನಾವಣೆ ಪ್ರಯುಕ್ತ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯು ಚೆಕ್‌ ಪೋಸ್ಟ್ಗಳನ್ನು ನಿರ್ಮಿಸಿ ತಪಾಸಣೆ ಕಾರ್ಯದಲ್ಲಿ ತೊಡಗಿದೆ. ಈ ಹಿನ್ನೆಲೆಯಲ್ಲಿ ಕೆಲವು ವ್ಯಕ್ತಿಗಳು ತಮ್ಮ ವಾಹನಗಳಿಗೆ ಮಿಡಿಯಾ, ಪ್ರೆಸ್ ಸ್ಟಿಕ್ಕರ್ ಹಾಕಿಕೊಂಡು ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಸಂಘಕ್ಕೆ ದೂರುಗಳು ಬಂದಿವೆ. ಈ ರೀತಿಯ ವಾಹನಗಳನ್ನು ಚೆಕ್‌ಪೋಸ್ಟ್‌ ಗಳಲ್ಲಿ ಅಗತ್ಯ ತಪಾಸಣೆ ಮಾಡಬೇಕು ಮತ್ತು ಅದರಲ್ಲಿ ಯಾವುದೇ ಅಕ್ರಮ ಚಟುವಟಿಕೆ ಕಂಡುಬಂದರೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ನಾಲ್ವರು ದುಷ್ಕರ್ಮಿಗಳಿಂದ ಅತ್ಯಾಚಾರ; ಬಂಧನ

“ನಮ್ಮ ಸಂಘದಿಂದ ಎಲ್ಲ ಸದಸ್ಯರುಗಳಿಗೆ ಗುರುತಿನ ಚೀಟಿ ಮತ್ತು ವಾಹನಗಳಿಗೆ ಅಧಿಕೃತ ಮಿಡಿಯಾ ಸ್ಟಿಕ್ಕರನ್ನು ನೀಡಲಾಗಿದೆ. ಪತ್ರಕರ್ತರ ಹೆಸರಿನಲ್ಲಿ ಯಾರೇ ಹಣ ವಸೂಲಿಗೆ ಬಂದರೂ ಅಂತಹವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗಳಿಗೆ ದೂರು ನೀಡಬೇಕು ಮತ್ತು ನಮ್ಮ ಸಂಘದ ಗಮನಕ್ಕೂ ತರಬೇಕು” ಎಂದು ತಿಳಿಸಿದ್ದಾರೆ.

ನಿಯೋಗದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಜತೆ ಕಾರ್ಯದರ್ಶಿಗಳಾದ ರಹೀಂ ಉಜಿರೆ, ಪ್ರಮೋದ್ ಸುವರ್ಣ, ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ, ಜಿಲ್ಲಾ ಸಮಿತಿ ಸದಸ್ಯರಾದ ಮೈಕಲ್ ರೋಡಿಗ್ರಸ್, ಹರೀಶ್ ಬಲಾಯಿಪಾದೆ, ಸಂಘದ ಸದಸ್ಯ ಶಶಿಧರ ಮಾಸ್ತಿಬೈಲು, ದೀಪಕ್ ಜೈನ್, ದಿನೇಶ್ ಎಂ.ಎಚ್, ಚೇತನ್ ಮಟಪಾಡಿ, ಅಶ್ವತ್ ಆಚಾರ್ಯ, ಜಸ್ಟಿನ್ ಡಿಸಿಲ್ವ, ಗೋಪಾಲಕೃಷ್ಣ ಪಾದೂರು, ರಕ್ಷಿತ್ ಬೆಳಪು, ನಾಗರಾಜ ರಾವ್, ಬಾಲಚಂದ್ರ ಎಚ್. ಸೇರಿದಂತೆ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X