ಸಾರಿಗೆ ನೌಕರರ ವಿರುದ್ಧ ಸರ್ಕಾರ ಎಸ್ಮಾ ಜಾರಿ, ಆರು ತಿಂಗಳವರೆಗೂ ಪ್ರತಿಭಟಿಸುವಂತಿಲ್ಲ

Date:

Advertisements

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಎಸ್ಮಾ ಜಾರಿ ಮಾಡಿದೆ.

ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಕೆಎಸ್​ಆರ್​ಟಿಸಿ, ಬಿಎಂಆರ್​ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಸಿಬ್ಬಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದರು. ಆಗಸ್ಟ್ 5ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಆದರೆ ಇದೀಗ ಸಾರಿಗೆ ನೌಕರರು ಪ್ರತಿಭಟನೆ ನಡೆಸದಂತೆ ಕಾರ್ಮಿಕ ಇಲಾಖೆ ಎಸ್ಮಾ ಜಾರಿ ಮಾಡಿದೆ. ಇದು ಮುಂದಿನ ಆರು ತಿಂಗಳು ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಯಾವುದೇ ರೀತಿಯ ಮುಷ್ಕರವನ್ನು ನಿಷೇಧಿಸಲಾಗಿದೆ.

ಏನಿದು ಎಸ್ಮಾ?

ಸರ್ಕಾರಿ ನೌಕರರು ಸಾಮೂಹಿಕ ಪ್ರತಿಭಟನೆ ನಡೆಸಿ ಪರಿಸ್ಥಿತಿ ನಿಯಂತ್ರಣ ತಪ್ಪುತ್ತದೆ ಎನ್ನುವುದು ಸರ್ಕಾರದ ಗಮನಕ್ಕೆ ಬಂದರೆ ಎಸ್ಮಾ ಜಾರಿ ಮಾಡಲು ಮುಂದಾಗುತ್ತದೆ. ಮೂಲ ಸೌಕರ್ಯಗಳಾದ ಆಹಾರ, ಭದ್ರತೆ, ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆಗೆ ಮುಖಭಂಗ ಬರುವ ಹಂತಕ್ಕೆ ಪ್ರತಿಭಟನೆಗಳು ಬಂದಾಗ ಸರ್ಕಾರ ಎಸ್ಮಾ ಜಾರಿ ಮಾಡುವ ಅಧಿಕಾರವಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತುಳಿದಷ್ಟು ಪುಟಿದೇಳುವ ರಾಹುಲ್ ಎಂಬ ಜನನಾಯಕ

ಎಸ್ಮಾ ಎಂದರೆ ಕಡ್ಡಾಯ ಕೆಲಸ. ಸಂವಿಧಾನದಲ್ಲಿ ತಿಳಿಸಿರುವಂತೆ, 7ರಲ್ಲಿನ 2ನೇ ಪಟ್ಟಿಯಲ್ಲಿರುವ ‘ಸಾರ್ವಜನಿಕ ಸುವ್ಯವಸ್ಥೆ’ ಮತ್ತು ‘ಪೊಲೀಸ್’ ಸಂಬಂಧಿಸಿದ ಎಲ್ಲಾ ಸೇವೆಗಳ ಕುರಿತು ರಾಜ್ಯ ಶಾಸಕಾಂಗವು ಕಾನೂನು ರೂಪಿಸುವ ಅಧಿಕಾರ ಹೊಂದಿರುತ್ತದೆ. ಎಸ್ಮಾ ಕಾಯ್ದೆ ಉಲ್ಲಂಘನೆ ಮಾಡಿದರೆ ವಾರಂಟ್ ಇಲ್ಲದೇ ಬಂಧನ ಮಾಡಬಹುದು. ಅಲ್ಲದೆ ಆರು ತಿಂಗಳು ಜೈಲು ವಾಸ ಶಿಕ್ಷೆಯನ್ನು ನೀಡುವ ಸಾಧ್ಯತೆಯೂ ಇರುತ್ತದೆ ಎಂಬ ಉಲ್ಲೇಖವಿದೆ.

ಎಸ್ಮಾ ಜಾರಿಯಲ್ಲಿದ್ದ ಮೇಲೆ ಅದನ್ನು ಧಿಕ್ಕರಿಸಿ ಉದ್ಯೋಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಆತನ ವೇತನ, ಭತ್ಯೆ, ಬಡ್ತಿ ಮತ್ತು ಇತರ ಸವಲತ್ತುಗಳ ಮೇಲೆ ಪರಿಣಾಮ ಉಂಟಾಗುತ್ತದೆ. ಈ ಕಾರಣಕ್ಕೆ ರಾಜ್ಯ ಸರ್ಕಾರಗಳು ಉದ್ಯೋಗಿಗಳು ಹಠ ಮುಂದುವರಿಸಿದರೆ ಕೊನೆಯ ಅಸ್ತ್ರವಾಗಿ ಎಸ್ಮಾ ಜಾರಿಗೊಳಿಸುತ್ತವೆ.

***

ಸೌಜನ್ಯ ಪರ ನಿಂತಿದ್ದಕ್ಕಾಗಿ ಈದಿನ ಯೂಟ್ಯೂಬ್ ಚಾನೆಲ್ ಬ್ಲಾಕ್ ಮಾಡಲಾಗಿದೆ ಪರ್ಯಾಯವಾಗಿ ಈದಿನ ಟಿವಿ ಚಾನೆಲ್ ಕಾರ್ಯನಿರ್ವಹಿಸುತ್ತಿದೆ. Subscribe ಮಾಡಿ
👇
https://www.youtube.com/@EedinaTv

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

Download Eedina App Android / iOS

X