ಮಂಗಳೂರು | ಜು.23ರಂದು ಲೋಕಾಯುಕ್ತ ಜನಸಂಪರ್ಕ ಸಭೆ

Date:

Advertisements

ಮಂಗಳೂರು ತಾಲೂಕು ಕಚೇರಿಯಲ್ಲಿ ಜುಲೈ 23 ರಂದು ಬೆಳಗ್ಗೆ 11 ಗಂಟೆಯಿಂದ ಲೋಕಾಯುಕ್ತ ಜನಸಂಪರ್ಕ ಸಭೆ ಆಯೋಜಿಸಲಾಗಿದೆ.

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜುಲೈ 23 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿಡವಿಟ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು.

ಅರ್ಜಿದಾರರು ನಮೂನೆ I & II ರಲ್ಲಿ ಭರ್ತಿ ಮಾಡಿ ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಕಚೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೋಲಿಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements

ಇದನ್ನೂ ಓದಿ: ಮಂಗಳೂರು | ಜು.14-17ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಕಚೇರಿ ವೇಳೆಯಲ್ಲಿಯೂ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದು. ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು: ಪೊಲೀಸ್ ಅಧೀಕ್ಷಕರ ಕಚೇರಿ 2950997/ 9364062517, ಪೊಲೀಸ್ ಉಪಾಧೀಕ್ಷಕರು-1 ಕಚೇರಿ 2453420/ 9364062579, ಪೊಲೀಸ್ ಉಪಾಧೀಕ್ಷಕರು-2 ಕಚೇರಿ 2453420 /9364062580, ಪೊಲೀಸ್ ನಿರೀೀಕ್ಷಕರು-1 ಕಚೇರಿ 2427237/ 9364062691, ಪೊಲೀಸ್ ನಿರೀಕ್ಷಕರು-2 ಕಚೇರಿ 0824 2427237/ 9364062693

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X