ಶಿವಮೊಗ್ಗ | ನರಗುಂದದಲ್ಲಿ ಜು. 21ರಂದು ರೈತ ಹುತಾತ್ಮ ದಿನಾಚರಣೆ : ಎಚ್ ಆರ್ ಬಸವರಾಜಪ್ಪ

Date:

Advertisements

ಶಿವಮೊಗ್ಗ, ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ಭೂಸ್ವಾಧೀನದ ಹೋರಾಟದ ಜಯವನ್ನು ಜುಲೈ-21 ರಂದು ನರಗುಂದ-ನವಲಗುಂದ ಹುತಾತ್ಮರಿಗೆ ಹಾಗೂ ಇಲ್ಲಿಯವರೆಗೆ ಹೋರಾಟದಲ್ಲಿ ಹುತಾತ್ಮರಾದ ಎಲ್ಲಾ ಹುತಾತ್ಮರಿಗೆ ಅರ್ಪಿಸಿಲಾಗುವುದು ಮತ್ತು ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮುಂದಿನಹೋರಾಟವನ್ನು ರೂಪಿಸಲು 45ನೇ ರೈತ ಹುತಾತ್ಮ ದಿನಾಚರಣೆಯನ್ನು ಜು.21 ರ ಸೋಮವಾರ 11ಗಂಟೆಗೆ ನರಗುಂದದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಸವರಾಜಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್ ಆರ್. ಬಸವರಾಜಪ್ಪ , ದೇವನಹಳ್ಳಿ ಚನ್ನರಾಯಪಟ್ಟಣ ಭೂಸ್ವಾಧೀನದ ವಿರುದ್ಧ 1,198ದಿನದ ಹೋರಾಟದಲ್ಲಿ 1,777ಎಕರೆ ಕೆ.ಐ.ಎ.ಡಿ.ಬಿ ಗೆ ನೋಟೀಫಿಕೆಷನ್‌ ಮಾಡಿದ್ದನ್ನು ಹೋರಾಟದ ಫಲವಾಗಿ ಕೈಬಿಟ್ಟಿರುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ರೈತ, ಕಾರ್ಮಿಕ, ದಲಿತ ಸಂಘಟನೆಗಳ ಹೋರಾಟಕ್ಕೆ ಪ್ರಗತಿಪರ ಚಿಂತಕರು, ಸಿನಿಮಾ ನಟರು, ಕಲಾವಿದರ ಬೆಂಬಲ ವ್ಯಕ್ತವಾಗಿದ್ದರಿಂದ ಸರ್ಕಾರ ಹೋರಾಟಕ್ಕೆ ಮಣಿದು ಸ್ವತಃ ಮುಖ್ಯಮಂತ್ರಿಗಳೇ ಇದೊಂದು ಐತಿಹಾಸಿಕ ಹೋರಾಟ ಇದು ಎಲ್ಲಾ ಹೋರಾಟಗಾರರಿಗೆ ಸಂದ ಜಯ ಎಂದು ಭೂಮಿಯನ್ನು ಡಿನೋಟೀಫೈ ಮಾಡಲು ಘೋಷಿಸಿದ್ದಾರೆ ಎಂದರು.

1001918649

ಈ ಐಕ್ಯ ಹೋರಾಟಕ್ಕೆ ಸಂದ ಜಯವನ್ನು ನರಗುಂದ-ನವಲಗುಂದ ರೈತ ಹುತಾತ್ಮರಿಗೆ ಜುಲೈ 21ರಂದು ಅರ್ಪಣೆ ಮಾಡಲಾಗುವುದು ಮತ್ತು ರೈತರ ಜ್ವಲಂತ ಸಮಸ್ಯೆಗಳನ್ನ ಇಟ್ಟುಕೊಂಡು ಮುಂದಿನ ಹೋರಾಟದ ರೂಪುರೇಷೆಗಳನ್ನು ಈ ಬೃಹತ್‌ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

Advertisements

ಆದ್ದರಿಂದ ಈ ಬೃಹತ್‌ ಬಹಿರಂಗ ಸಭೆಗೆ ರೈತರು, ರೈತ ಮಹಿಳೆಯರು, ಕೃಷಿ ಕೂಲಿಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಕೋರಿದರು.

1001918652

ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ರೈತರಿಗೆ ಮಹತ್ತರ ನೀರಾವರಿ ಯೋಜನೆಯಾದ ಮಹಾದಾಯಿ ಸುಮಾರು 2 ದಶಕಗಳು ಕಳೆದರೂ ಈಗಿನವರೆಗೂ ಯಾವುದೇ ರೀತಿಯಲ್ಲೂ ಕಾಮಗಾರಿ ಆರಂಭಗೊಂಡಿಲ್ಲ. ಮಹಾದಾಯಿ ಯೋಜನೆಯ ಹೆಸರಿನಲ್ಲಿ ವಿವಿಧ ರಾಜಕೀಯ ಪಕ್ಷದ ರಾಜಕಾರಣಿಗಳು ಅಧಿಕಾರಕ್ಕೆ ಬಂದು ಆಡಳಿತ ನಡೆಸಿದರೂ ಸಹ ಯೋಜನೆಯ ಬಗ್ಗೆ ಗಮನಹರಿಸಿಲ್ಲ. ಮಹಾದಾಯಿ ಯೋಜನೆಯನ್ನು ವಿಶೇಷವಾಗಿ ಪರಿಗಣಿಸಿ ಸರ್ಕಾರಗಳು ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿದರು.

ಆಲಮಟ್ಟಿ ಜಲಾಶಯದ ಎತ್ತರವನ್ನು ಸುಪ್ರೀಂ ಕೋರ್ಟ್ ಆದೇಶದಂತೆ 524 ಮೀಟರ್ ಎತ್ತರಿಸಿ ಆ ಭಾಗದ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಮುಗಿಸಬೇಕೆಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X