ಶಿವಮೊಗ್ಗ | ಜುಲೈ 19ರಿಂದ ಮೂರು ದಿನ ಸಮನ್ವಯ ಸಂಗಮ

Date:

Advertisements

ಶಿವಮೊಗ್ಗ, ಸಮನ್ವಯ ಸಂಸ್ಥೆಯ 20ನೇ ಸಂವತ್ಸರ ಸಂಭ್ರಮದ ಹಿನ್ನೆಲೆಯಲ್ಲಿ ಜುಲೈ 19ರಿಂದ ಮೂರು – ದಿನ ಸಮನ್ವಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ‌ ನೀಡಿದ ಸಮನ್ವಯ ಸಂಸ್ಥೆಯ ಮುಖ್ಯಸ್ಥ ಸಮನ್ವಯ ಕಾಶಿ, ನಗರದ ಕುವೆಂಪು ರಂಗಮಂದಿರದಲ್ಲಿ ಜುಲೈ 19ರಂದು ಬೆಳಗ್ಗೆ 9.45ರಿಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಕಾರ್ಯಾಗಾರ “ಭರವಸೆಯ ಹೆಜ್ಜೆ” ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಸಮನ್ವಯ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.

ಭರವಸೆಯ ಹೆಜ್ಜೆ ಕಾರ್ಯಾಗಾರವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕರ್ನಾಟಕ ಹೌಸಿಂಗ್ ಬೋರ್ಡ್ ಆಯುಕ್ತ ಕೆ.ಎ.ದಯಾನಂದ್‌ ಉದ್ಘಾಟಿಸುವರು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್‌ ಕುಮಾರ್ ಭೂಮರಡ್ಡಿ, ಉಪವಿಭಾಗಾಧಿಕಾರಿ ಸತ್ಯನಾರಾಯಣ ಜಿ.ಎಚ್., ಅಮೃತ್ ನೋನಿ ವ್ಯವಸ್ಥಾಪಕ ನಿರ್ದೇಶಕ ಡಾ. ಶ್ರೀನಿವಾಸಮೂರ್ತಿ, ಕಟೀಲ್ ಅಶೋಕ್ ಪೈ ಸ್ಮಾರಕ ಸಮೂಹ ಶಿಕ್ಷಣ ಸಂಸ್ಥೆ ನಿರ್ದೇಶಕಿಡಾ!! ರಜನಿ ಪೈ, ಡಿಡಿಪಿಯು ಚಂದ್ರಪ್ಪ ಎಸ್.ಗುಂಡಪಲ್ಲಿ ಉಪಸ್ಥಿತರಿರುವರು. ಉದ್ಯಮಿ ವೆಂಕಟೇಶ್ ಎಸ್‌.ವಿ, ತರಬೇತುದಾರ ಸಾಧನಾ ಮಂಜುನಾಥ್, ಕೃಷಿಕ ದುರ್ಗಪ್ಪ ಅಂಗಡಿ ಹಾಗೂ ಕೆಎಪಿಎಂಸಿ ಪ್ರಾಂಶುಪಾಲೆ ಡಾ. ಸಂಧ್ಯಾ ಕಾವೇರಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವರು ಎಂದರು.

Advertisements

ನಗರದ ಕುವೆಂಪು ರಂಗಮಂದಿರದಲ್ಲಿ ಜುಲೈ 20ರಂದು ಸಂಜೆ 5.30ರಿಂದ ಸಮನ್ವಯ ಸಂಗಮ 2025, ಗಾನ-ಸನ್ಮಾನ-ಸತ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮನ್ವಯ ಟ್ರಸ್ಟ್ ಮುನ್ನಡೆಸುತ್ತಿರುವ ಕೆ.ಎ.ದಯಾನಂದ ಐಎಎಸ್‌ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಉಚಿತ ವಾಚನಾಲಯದ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಮನ್ವಯ ಸಂಸ್ಥೆಯ ಜತೆಯಲ್ಲಿ 20 ವರ್ಷಗಳಲ್ಲಿ ಕೆಲಸ ಮಾಡಿರುವ ಮಹಾಪೋಷಕರು, ಪೋಷಕರು, ಸ್ವಯಂಸೇವಕರು ಪಾಲ್ಗೊಳ್ಳುವರು ಎಂದರು.

ನಗರದ ಸೋಮಿನಕೊಪ್ಪ ರಸ್ತೆಯ ಆರ್ಯವೈಶ್ಯ ಸಮುದಾಯ ಭವನದಲ್ಲಿ ಜುಲೈ 21ರಂದು ಸಂಜೆ 6ಕ್ಕೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮನ್ವಯ ಟ್ರಸ್ಟ್, ಶಿವಮೊಗ್ಗ ಜಿಲ್ಲಾ ಭಜನಾ ಪರಿಷತ್, ಆರ್.ಜಿ.ಸ್ಟೇಟರಿಂಗ್ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.

ಮೈಸೂರಿನ ಅರ್ಜುನ ಅವಧೂತ ಮಹಾರಾಜರು, ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಿರಾಳಕೊಪ್ಪದ ಶ್ರೀ ಶಿವನಾಗ ಪಾರ್ಥ ಅವಧೂತರು ಉಪಸ್ಥಿತರಿರುವರು ಎಂದರು.

ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌, ಕೈಗಾರಿಕೋದ್ಯಮಿ ಎಸ್‌.ರುದ್ರೇಗೌಡ, ಅಬ್ದುಲ್ ಮುಜೀಬ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಪಾಲ್ಗೊಳ್ಳುವರು. ಸಮನ್ವಯ ಟ್ರಸ್ಟ್ ಅಧ್ಯಕ್ಷ ಕೆ.ಎಂ.ಗಿರಿಜಾದೇವಿ ಉಪಸ್ಥಿತರಿರುವರು. ಆ‌.ಜಿ.ಎಸ್.ಸ್ಟೇಟರಿಂಗ್‌ನ ಅಧ್ಯಕ್ಷ ಗಣೇಶ್‌ ಅಧ್ಯಕ್ಷತೆ ವಹಿಸುವರು ಎಂದು ಮಾಹಿತಿ‌‌ನೀಡಿದರು. .

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X