ಬೀದರ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಈಚೆಗೆ ವಿದ್ಯುತ್ ವ್ಯತ್ಯಯದಿಂದ ರೋಗಿಗಳಿಗೆ ತೊಂದರೆ ಉಂಟಾದ ಘಟನೆ ವರದಿಯಾದ ಬೆನ್ನಲ್ಲೇ ಶುಕ್ರವಾರ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿನ ರೋಗಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ, ಅವರು ಪಡೆಯುತ್ತಿರುವ ಚಿಕಿತ್ಸೆ ಹಾಗೂ ವೈದ್ಯರು ಹಾಗೂ ಸಿಬ್ಬಂದಿಯಿಂದ ಆಸ್ಪತ್ರೆಯೊಳಗಿನ ಸಮಸ್ಯೆಗಳ ಬಗ್ಗೆ ಸಚಿವರು ಸಂಪೂರ್ಣ ಮಾಹಿತಿ ಸಂಗ್ರಹಿಸಿದರು.

ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, ʼವಿದ್ಯುತ್ ವ್ಯತ್ಯಯದಿಂದ ಉಂಟಾದ ತೊಂದರೆ ನಿರ್ಲಕ್ಷ್ಯದಿಂದಾಗಿದ್ದರೆ, ಅದನ್ನು ಯಾವುದೇ ಕಾರಣಕ್ಕೂ ಕ್ಷಮಿಸಲಾಗದು. ಈ ಕುರಿತು ತಕ್ಷಣ ತನಿಖೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಬಂದ ತಕ್ಷಣ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದುʼ ಎಂದರು.
ʼಆಸ್ಪತ್ರೆಯಲ್ಲಿ ಯಾವುದೇ ತೊಂದರೆ ಆಗದಂತೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಜನರಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ನಾವು ಬದ್ಧರಾಗಿದ್ದೇವೆʼ ಎಂದು ಹೇಳಿದರು.
ಇದನ್ನೂ ಓದಿ : ಬೀದರ್ | ಮದ್ಯಪಾನ ಮಾಡಿ ವಾಹನ ಚಾಲನೆ : ಇಬ್ಬರಿಗೆ ದಂಡ ವಿಧಿಸಿದ ನ್ಯಾಯಾಲಯ
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ ಬದೋಲೆ, ಬ್ರಿಮ್ಸ್ ನಿರ್ದೇಶಕ ಶಿವಕುಮಾರ ಶೆಟಕಾರ್ ಸೇರಿದಂತೆ ಬ್ರಿಮ್ಸ್ ಸಿಬ್ಬಂದಿ, ಅಧಿಕಾರಿಗಳು ಉಪಸ್ಥಿತರಿದ್ದರು.