ಕೃಷಿಹೊಂಡ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಮಾರಿ ನಡೆದಿದ್ದು, ಗಾಯಾಳುಗಳು ಆಸ್ಪತ್ರೆಗೆ ಸೇರಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದ್ವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.
ದ್ವಾರಪಲ್ಲಿ ಗ್ರಾಮದ ಸರ್ವೆ ನಂ:13ರಲ್ಲಿ ನಾರಾಯಣಮ್ಮ ಅವರ 1-25 ಗುಂಟೆ ಜಮೀನಿನಲ್ಲಿ ಕೃಷಿ ಹೊಂಡವಿದೆ. ಈ ವಿಚಾರಕ್ಕೆ ಪಕ್ಕದ ಜಮೀನಿನ ಕದಿರಪ್ಪ ಎಂಬುವರು ಗುಂಪು ಕಟ್ಟಿಕೊಂಡು ಬಂದು ಹಲ್ಲೆ ಮಾಡಿದ್ದಾರೆಂದು ಆರೋಪಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ನಾರಾಯಣಮ್ಮ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ನಿಮಿಷಾ ಪ್ರಿಯಾ ಪ್ರಕರಣ: ತಲಾಲ್ ಕುಟುಂಬದೊಂದಿಗೆ ಡಾ. ಸಿ ಕೆ ಮೌಲಾ ಶರೀಫ್ ಮಾತುಕತೆ
ಇದೇ ಕೃಷಿ ಹೊಂಡ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಮಾರಿಯಾಗಿ ಎರಡೂ ಗುಂಪುಗಳವರು ಕೂಡ ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಎರಡು ಗುಂಪಿನವರೂ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಎರಡು ಗುಂಪುಗಳಿಂದ ಹೇಳಿಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.