ಶಿವಮೊಗ್ಗ | ಡಿ ಎಸ್ ಎಸ್ ಅಂಬೇಡ್ಕರ್ ವಾದ ಹಾಲೇಶಪ್ಪ ನೇತೃತ್ವದಲ್ಲಿ ದಲಿತರ ಭೂಮಿಯ ಹಕ್ಕಿಗಾಗಿ ಪ್ರತಿಭಟನಾ ಧರಣಿ

Date:

Advertisements

ಶಿವಮೊಗ್ಗ ದಲಿತರ ಭೂಮಿಯ ಹಕ್ಕಿಗಾಗಿ ಪ್ರತಿಭಟನಾ ಧರಣಿಭೂಮಿ ಒಂದು ಉತ್ಪಾದನಾ ಸಾಧನವಾಗಿದೆ, ಭೂಮಿ ಉಳ್ಳವರಿಗೆ ಸಾಮಾಜಿಕ ಘನತೆಯನ್ನು ಹಾಗೂ ಆಳುವ ವರ್ಗವಾಗಿ ಸಮಾಜವನ್ನು ನಿಯಂತ್ರಿಸುವ ಅಧಿಕಾರವನ್ನು ನೀಡುತ್ತದೆ ಹಾಗೂ

ವೈದಿಕ ಧರ್ಮ ಆರ್ಥಾತ್ ‘ಬ್ರಾಹ್ಮಣ ಧರ್ಮ’ ತಲತಲಾಂತರಗಳಿಂದ ದಲಿತರನ್ನು ಭೂಮಿ ಹಾಗೂ ನೈಸರ್ಗಿಕ ಸಂಪತ್ತಿನಿಂದ ವಂಚಿಸುತ್ತಾ ಬಂದಿದೆ. ಸ್ವತಂತ್ರ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್, ರವರ ಅಂದೋಲನದಿಂದಾಗಿ ದಲಿತ-ದಮನಿತರಲ್ಲಿ ಬೆಳೆಯುತ್ತಿರುವ ಸಾಮಾಜಿಕ ಮತ್ತು ವರ್ಗ ಪ್ರಜ್ಞೆಯಿಂದ ಬ್ರಾಹ್ಮಣ ಶಾಹಿ/ಬಂಡವಾಳಶಾಹಿಗೆ ನುಂಗಲಾರದ ತುತ್ತಾಗಿ ಪರಿಣಿಮಿಸಿದೆ.ಬಾಬಾಸಾಹೇಬರ ಸೈದ್ಧಾಂತಿಕ ನೆಲೆಯಲ್ಲಿ ದಲಿತ ಚಳವಳಿ, ಭೂಮಿ, ಶಿಕ್ಷಣ, ಉದ್ಯೋಗ ಮುಂತಾದ ಮನುಷ್ಯನ ಮೂಲಭೂತ ಅವಶ್ಯಕತೆಗಾಗಿ ಆಳುವ ಪ್ರಭುತ್ವದೊಂದಿಗೆ ನಿರಂತರ ಸಂಘರ್ಷ ನಡೆಸುತ್ತಾ ಬಂದಿದೆ ಎಂದು ಡಿಎಸ್ ಎಸ್. ಅಂಬೇಡ್ಕರ್ ವಾದದ ಹಾಲೇಶಪ್ಪ ಆಕ್ರೋಶ ಹೊರಹಾಕಿದರು.

ಇಂದು ಶಿವಮೊಗ್ಗ ತಾಲೂಕ್ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ತದನಂತರ ಈ ಕೆಳಕಂಡ ಮಾಹಿತಿ ತಿಳಿಸಿದರು ಅದೇನಂದರೆ,

1001919335

ಕಳೆದ 4 ದಶಕಗಳಿಂದ ದಲಿತರು ಭೂಮಿ ಹಕ್ಕಿಗಾಗಿ ನಡೆಸಿದ ಹೋರಾಟದಲ್ಲಿ ದರಖಾಸ್ತು ಜಮೀನು ಮಂಜೂರು ಮಾಡುವ ಕಾಯ್ದೆ ಜಾರಿಗೆ ತಂದಿತ್ತು. ಇಂದಿಗೂ ಸಹ ಸರ್ಕಾರದ ಅಧಿಕೃತ ಅಂಕಿ-ಅಂಶಗಳ ಪ್ರಕಾರ ರಾಜ್ಯದ ಒಟ್ಟು ಭೂಮಿಯಲ್ಲಿ ದಲಿತರು ಕೇವಲ 11% ಭೂಮಿ ಮಾತ್ರ ಹೊಂದಿರುತ್ತಾರೆ.

ಇದರಲ್ಲಿ ನೀರಾವರಿ ಪ್ರದೇಶದ ಭೂಮಿ ಅತ್ಯಲ್ಪವಾಗಿದೆ.70 ರ ದಶಕದಲ್ಲಿ ಮಾನ್ಯ ಬಿ.ಬಸವಲಿಂಗಪ್ಪ ನವರ ದೂರದೃಷ್ಟಿಯ ಫಲವಾಗಿ ಪಿ.ಟಿ.ಸಿ.ಎಲ್. ಕಾಯ್ದೆ ಜಾರಿಗೆ ಬಂದಿದ್ದರೂ ಸಹ ಜಾತಿವಾದಿಗಳ ಹಾಗೂ ಅಧಿಕಾರ ಶಾಹಿಯ ಮಸಲತ್ತಿನಿಂದ ಮತ್ತು ಸರ್ಕಾರಗಳ ಕುತಂತ್ರದಿಂದ ಪಿ.ಟಿ.ಸಿ.ಎಲ್ ಜಮೀನುಗಳ ಪ್ರಕರಣಗಳಲ್ಲಿ ದಲಿತ ಸಮುದಾಯಗಳು ಕೋರ್ಟ್‌ಗಳಿಗೆ ಅಲೆಯುತ್ತಾ ವಂಚನೆಗೆ ಒಳಗಾಗಿದ್ದಾರೆ.

1001919336

ಈ ಹಿನ್ನೆಲೆಯಲ್ಲಿ ದ.ಸಂ.ಸ ( ಅಂಬೇಡ್ಕರ್ ವಾದ ) ರಾಜ್ಯ ಸಮಿತಿ ‘ಹೆಂಡಬೇಡ ಭೂಮಿ ಬೇಕು’ ಎನ್ನುವ ಘೋಷಣೆಯನ್ನು 80 ರ ದಶಕದಲ್ಲಿ ಮೊಳಗಿಸಿತು. ಆದೇ ರೀತಿ, ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ದಲಿತರನ್ನು ಅರಣ್ಯಭೂಮಿ/ಸಾಮಾಜಿಕ ಅರಣೀಕರಣ /ದಿಗೋವುಗಳ ಗೋಮಾಳಗಳಿಗೆ ಕಾಯಿಸಿರುವ ನೆಪದಲ್ಲಿ ಒಕ್ಕಲೆಬ್ಬಿಸುವುದನ್ನು ಖಂಡಿಸುತ್ತೇವೆ ಹಾಗೂ ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಸರ್ಕಾರಗಳು ಕೈಗಾರಿಕೆಗಳ ಸ್ಥಾಪನೆಗಾಗಿ ವಿದೇಶಿ ಬಂಡವಾಳಗಾರರಿಗೆ ಈ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವುದು ದಲಿತರನ್ನು ಸಂಪೂರ್ಣವಾಗಿ ಭೂಮಿಯಿಂದ ಹೊರದಬ್ಬುವ ಕುತಂತ್ರವಾಗಿದೆ ಎಂದರು.

ದರಕಾಸ್ತು ಭೂಮಿ ಸಕ್ರಮೀಕರಣ ಶಾಸಕರುಗಳ ಅಧ್ಯಕ್ಷತೆಯಲ್ಲಿರುವ ಸಮಿತಿಗಳು ನಿರ್ಲಕ್ಷ್ಯದಿಂದ ಸಭೆಗಳು ನಡೆಯದೇ ಫಾರಂ 50, 53, 57 ರಲ್ಲಿ ಸಲ್ಲಿಸಿರುವ ದಲಿತ / ತಳ ಸಮುದಾಯಗಳ ಅರ್ಜಿಗಳು ರಾಶಿಗಟ್ಟಲೆ ಕೊಳೆಯುತ್ತ ಬಿದ್ದಿವೆ. ಅವುಗಳಲ್ಲಿ ಜಿ.ಪಿ.ಎಸ್ ಮೂಲಕ ಉಳುಮೆ ಮಾಡುತ್ತಿಲ್ಲವೆಂದು ಹೇಳಿ ಸಾವಿರಾರು ಅರ್ಜಿಗಳನ್ನು ವಜಾಗೊಳಿಸಲಾಗಿದೆ.

1001919337

ಸರ್ಕಾರದ ಈ ಧೋರಣೆಯ ವಿರುದ್ಧ ದಲಿತರು ಭೂಮಿಯ ಹಕ್ಕಿಗಾಗಿ ದಿನಾಂಕ 18 ಜುಲೈ 2025 ರ ಇಂದು ಪ್ರಥಮ ಹಂತವಾಗಿ ತಾಲ್ಲೂಕು ಕಚೇರಿಗಳ ಮುಂದೆ ಭೂಮಿ ಮಂಜೂರಾತಿಗೆ ಅಗ್ರಹಿಸಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.

ಸರ್ಕಾರದ ಮುಂದಿನ ನಡೆಯನ್ನು ಗಮನಿಸಿ ಮುಂದಿನ ಹೋರಾಟವನ್ನು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದಾಗಿ ತಿಳಿಸಿದರು.

ಹಕ್ಕೋತ್ತಾಯಗಳು

ಪರಿಶಿಷ್ಟ ಜಾತಿ/ ವರ್ಗ ಹಾಗೂ ಭೂಹೀನ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿ ( ದರಖಾಸ್ತು ಮಂಜೂರಾತಿ ಸಕ್ರಮೀಕರಣ) ಕಾಲಮಿತಿಯೊಳಗಾಗಿ ಇತ್ಯರ್ಥಗೊಳಿಸಬೇಕು. ವಿನಾಕಾರಣ ವಜಾಗೊಳಿಸಿರುವ ಬಗರ್ ಹುಕುಂ ಸಾಗುವಳಿಯ ಅರ್ಜಿಗಳನ್ನು ಮರುಪರಿಶೀಲಿಸಬೇಕು ಎಂದರು.

ಪರಿಶಿಷ್ಟರ ಪಿ.ಟಿ.ಸಿ.ಎಲ್ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡದ ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.ಹೈಕೋರ್ಟ್‌ಗಳಲ್ಲಿ ಪಿ.ಟಿ.ಸಿ.ಎಲ್ ಪ್ರಕರಣಗಳು ವಜಾಗೊಳ್ಳುತ್ತಿದ್ದು, ನುರಿತ ಹಿರಿಯ ವಕೀಲರನ್ನು ನೇಮಿಸಿ ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಬೇಕು.

ಬೆಂಗಳೂರು ನಗರ ಜಿಲ್ಲೆ, ಪೂರ್ವ ತಾಲೂಕಿನ ಕಾಡುಗೋಡಿ ಪ್ಲಾಂಟೇಷನ್ ನಲ್ಲಿ ಪರಿಶಿಷ್ಟ ಜಾತಿಯವರಿಗೆ ಮಂಜೂರಾಗಿರುವ ಭೂಮಿಯಲ್ಲಿ ಅರಣ್ಯ ಅಧಿಕಾರಿಗಳು ಒಕ್ಕಲೆಬ್ಬಿಸುವುದನ್ನು ಕೂಡಲೇ ತಡೆಗಟ್ಟಬೇಕು. ಅಧಿಕಾರಿಗಳ ವಿರುದ್ಧ ಎಸ್.ಸಿ/ ಎಸ್.ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಮತ್ತು ಕೈಗಾರಿಕೆ ಸ್ಥಾಪನೆ ನೆಪದಲ್ಲಿ ಕೆಐಎಡಿಬಿ ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಗುರುತಿಸಿರುವ 1777 ಎಕರೆ. ಫಲವತ್ತಾದ ಕೃಷಿ ಭೂಮಿಯ ಭೂಸ್ವಾದೀನ ನಿರ್ಧಾರವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದರು.

ಅರಣ್ಯ ಭೂಮಿಯಲ್ಲಿ 1978 ಕ್ಕಿಂತ ಹಿಂದಿನಿಂದ ಸಾಗುವಳಿ ಮಾಡುತ್ತಿರುವ ಭೂಹೀನ ದಲಿತರ ಜಂಟಿ ಸರ್ವೇಮಾಡಿಸಿ ಸಾಗುವಳಿ ಕೊಡಿಸಿಕೊಡಬೇಕು ಹಾಗೂ,

ರಾಜ್ಯದ್ಯಂತ 30,40 ವರ್ಷಗಳ ಹಿಂದೆ ಮಂಜೂರು ಮಾಡಿ ಸಾಗುವಳಿ ನೀಡಿರುವ ಭೂಮಿಗೆ ಈಗ ಅರಣ್ಯ ಭೂಮಿಯೆಂದು ನೋಟೀಸ್ ನೀಡಿ ಖಾತೆ ವಜಾ ಮಾಡಲು ನೀಡಿರುವುದನ್ನು ಸರ್ಕಾರ ಯವುದೇ ಕಾರಣಕ್ಕೂ ಖಾತೆ ವಜಾ ಮಾಡಬಾರದು. ಸಾಗುವಳಿದಾರರಿಗೆ ತೊಂದರೆಯಾಗದಂತೆ ಸರ್ಕಾರ ಕಾನೂನು ತಿದ್ದುಪಡಿ ಮಾಡಬೇಕೆಂದು ಅಗ್ರಹಿಸಿದರು.

ಭದ್ರಾವತಿ ತಾಲ್ಲೂಕು ಚಂದನಕೆರೆ ಸರ್ವೇ ನಂ:12 ರಲ್ಲಿ ಮಂಜೂರಾದ ಭೂಮಿಯನ್ನು ಎಂ.ಪಿ.ಎಂ. ನವರು ಅತಿಕ್ರಮಿಸಿ ಉಳುಮೆ ಮಾಡುತ್ತಿದ್ದ ದಲಿತರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿರುವುದನ್ನು ಸರ್ಕಾರ ಹಿಂಪಡೆದು, ಭೂಮಿಯನ್ನು ಮಂಜೂರುದಾರರಿಗೆ ಬಿಡಿಸಿಕೊಡಬೇಕು ಹಾಗೂ ಬಗರ್ ಹುಕ್ಕುಂ ಸಾಗೋವಳ್ಳಿ ಮಾಡುತ್ತಿದ್ದ ಚಂದನಕೆರೆ ದಲಿತರಿಗೆ ಭೂಮಿ ಮಂಜೂರು ಮಾಡಬೇಕು ಎಂದು ಅಗ್ರಹಿಸಿದರು

ಹಾಗೂ ತಹಶೀಲ್ದಾರ್ ಶಿವಮೊಗ್ಗ ತಾಲ್ಲೂಕು, ಶಿವಮೊಗ್ಗ ಇವರ ಮುಖಾಂತರ ಸಿದ್ದರಾಮಯ್ಯನವರು ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X