ವಿಜಯಪುರ | ಬಿಎಲ್‌ಒ ಕೆಲಸ ನೀಡದಂತೆ ಅಂಗನವಾಡಿ ಕಾರ್ಯಕರ್ತೆಯರ ಮನವಿ

Date:

Advertisements

ಅಂಗವಾಡಿ ಕಾರ್ಯಕರ್ತೆಯರಿಗೆ ವಹಿಸಿರುವ ಚುನಾವಣಾ ಕಾರ್ಯವಾದ ಬ್ಲಾಕ್ ಲೆವಲ್ ಆಫೀಸರ್(ಬಿಎಲ್‌ಒ) ಕೆಲಸದಿಂದ ಮುಕ್ತಿ ನೀಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಪಟ್ಟಣದ ಮಿನಿ ವಿಧಾನಸೌಧದ ಎದುರು ಕೆಲ ಕಾಲ ಪ್ರತಿಭಟನೆ ಮಾಡಿ ತಹಶೀಲ್ದಾರ್ ಬಿ ಎಸ್ ಕಡಕಬಾವಿ ಅವರಿಗೆ ಮನವಿ ಸಲ್ಲಿಸಿದರು.

“ಬ್ಲಾಕ್ ಲೆವಲ್ ಆಫೀಸರ್(ಬಿಎಲ್‌ಒ) ಕೆಲಸವನ್ನು ನಿರ್ವಹಿಸುವಂತೆ ಸರ್ಕಾರ ಆದೇಶ ಮಾಡಿದ್ದು, ಆ ಕೆಲಸವನ್ನು ಅಂಗನವಾಡಿ ಕಾರ್ಯಕರ್ತೆಯರು ಮಾಡಲು ಸಾಧ್ಯವಿಲ್ಲ. ಅದರಿಂದ ಮುಕ್ತಿ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಈಗಾಗಲೇ ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಮಕ್ಕಳ ಆರೋಗ್ಯ ಕಾಪಾಡುವುದರ ಜತೆಗೆ ಅವರ ಎಲ್ಲ ಯೋಗಕ್ಷೇಮಗಳ ಬಗ್ಗೆ ನಿಗಾವಹಿಸಬೇಕಿದೆ. ಕಾರಣ ಅಂಗನವಾಡಿ ಕಾರ್ಯಕರ್ತೆಯರಿಗೆ ಬಿಎಲ್‌ಒ ಕೆಲಸ ನೀಡಬಾರದು” ಎಂದು ಒತ್ತಾಯಿಸಿದರು.

ಈ ಸುದ್ದು ಓದಿದ್ದೀರಾ? ಕೋಲಾರ | ಜು. 19, 20ರಂದು ಜಿಲ್ಲಾಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರ

“ತಾಲೂಕಿನ ಅಂಗನವಾಡಿ ಕಾರ್ಯ ಕರ್ತೆಯರಿಗೆ ಸರಿಯಾಗಿ ಗೌರವಧನ ಕೂಡಾ ನೀಡುವುದಿಲ್ಲ. ಅಂಗನವಾಡಿ, ಕಟ್ಟಡಗಳ ಬಾಡಿಗೆ ನೀಡುವುದಿಲ್ಲ. ಬಿಎಲ್‌ಒ ಕೆಲಸದಿಂದ ನಮಗೆ ವಿನಾಯಿತಿ ನೀಡಬೇಕು” ಎಂದು ಮನವಿ ಮಾಡಿಕೊಂಡರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ, ಸಿಐಟಿಯು ತಾಲೂಕಾಧ್ಯಕ್ಷೆ ಭಾರತಿ ವಾಲಿ, ಈರಣ್ಣ ಬೆಳುಂಡಗಿ ಪ್ರತಿಭಟನಾ ನೇತೃತ್ವ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

Download Eedina App Android / iOS

X