ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‍ಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ರೂ.1 ಲಕ್ಷ.
ವಿದ್ಯಾರ್ಥಿಗಳು https://shp.karnataka.gov.in/hewd ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 14. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ನೋಡಬಹುದು.
ಇದನ್ನೂ ಓದಿ: ಮಂಗಳೂರು | ಸಾಹಿತ್ಯ ಕ್ಷೇತ್ರದಲ್ಲಿ ಫಗು ಹಳಕಟ್ಟಿಯವರ ಸಾಧನೆ ಅಪಾರ: ಪ್ರಭಾಕರ್ ನೀರುಮಾರ್ಗ
ಹೆಚ್ಚಿನ ಮಾಹಿತಿಗೆ [email protected] ಇ-ಮೇಲ್ ಮುಂಖಾತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ/ ತಾಲ್ಲೂಕು ಅಧಿಕಾರಿಗಳನ್ನು (ಸಹಾಯವಾಣಿ:-8050770004/ 8050770005) ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
