ಮಂಗಳೂರಿನಲ್ಲಿ ಹೆಬ್ಬಾವು ಮಾರಾಟ ಜಾಲ ಪತ್ತೆ; ಅಪ್ರಾಪ್ತ ಬಾಲಕ ಸೇರಿ ನಾಲ್ವರ ಬಂಧನ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹೆಬ್ಬಾವು ಮಾರಾಟ ಜಾಲವನ್ನು ಪತ್ತೆ ಹಚ್ಚಿ, ಅಪ್ರಾಪ್ತ ಬಾಲಕ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಮಂಗಳೂರಿನ ಬಡಗ ಉಳಿಪ್ಪಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ (18), ಸ್ಟೇಟ್‌ ಬ್ಯಾಂಕ್ ಬಳಿಯ ಸಾಕುಪ್ರಾಣಿ ಅಂಗಡಿ ಮಾಲಕ ಉಳ್ಳಾಲ ಮುನ್ನೂರು ಗ್ರಾಮದ ಇಬ್ರಾಹೀಂ ಶಕೀಲ್ ಇಸ್ಮಾಯಿಲ್ (35), ಅಂಗಡಿ ಸಿಬ್ಬಂದಿ ಉಳ್ಳಾಲ ಹರೇಕಳ ಗ್ರಾಮದ ಮಹಮ್ಮದ್ ಮುಸ್ತಫಾ (22) ಮತ್ತು ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ 16 ವರ್ಷದ ಬಾಲಕ ಬಂಧಿತರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಂಗಳೂರು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾ‌ರ್ ತಂಡವು ಮೊದಲಿಗೆ ಇಬ್ಬರನ್ನು ಹೆಬ್ಬಾವು ಖರೀದಿಸುವ ನೆಪದಲ್ಲಿ ವಿಹಾಲ್‌ ಜತೆಗೆ ಮಾತುಕತೆ ನಡೆಸಿದರು. ಬಳಿಕ ನಗರದ ಕದ್ರಿಯ ಅಶ್ವತ್ಥ ಕಟ್ಟೆಯ ಬಳಿ ಈ ಬಗ್ಗೆ ಆತನೊಂದಿಗೆ ವ್ಯವಹಾರ ಮಾಡಲಾಯಿತು.

Advertisements

ಆತ ಹಾವನ್ನು ತೋರಿಸಿ ರೂ.45 ಸಾವಿರಕ್ಕೆ ನಿಗದಿಪಡಿಸುತ್ತಾರೆ. ಈ ವೇಳೆ ಆತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದರಿಂದ ಭೀತನಾದ ಆತ ಹಾವು ನನ್ನದಲ್ಲ ಎಂದು ಅಪ್ರಾಪ್ತ ಬಾಲಕನದು, ಅದನ್ನು ಮಾರಲೆಂದು ನೀಡಿದ್ದಾನೆ ಎಂದು ಹೇಳಿದ ನಂತರ ಆತನ ಮೂಲಕವೇ ಬಾಲಕನಿಗೆ ಕರೆ ಮಾಡಿಸಿ ಮಾಲ್‌ ಬಳಿ ಬರಲು ಹೇಳಿ ಅವನನ್ನು ಅಲ್ಲೇ ಬಂಧಿಸಿದರು.

ಸ್ಟೇಟ್‌ಬ್ಯಾಂಕ್‌ ಬಳಿರುವ ಸಾಕು ಪ್ರಾಣಿ ಮಾರಾಟ ಅಂಗಡಿಯಲ್ಲಿ ಹಾವು ಮಾರಾಟ ಮಾಡುತ್ತಿದ್ದಾರೆ ಎನ್ನುವು ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಹಕರ ಸೋಗಿನಲ್ಲಿ ಒಬ್ಬ ಯುವಕನನ್ನು ಅಲ್ಲಿಗೆ ಕಳುಹಿಸಲಾಯಿತು. ಅಲ್ಲಿನ ಸಿಬ್ಬಂದಿ ತಮ್ಮಲ್ಲಿ ಹಾವಿದೆ ತರಿಸಿ ಕೊಡುತ್ತೇವೆ ಎಂದು ವಿಹಾಲ್‌ಗೆ ಕರೆ ಮಾಡಿದ ಕೂಡಲೇ, ತತ್‌ಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಮಾಲೀಕ ಹಾಗೂ ಸಿಬ್ಬಂದಿಯನ್ನು ವಶಪಡೆದುಕೊಂಡರು. ಅಂಗಡಿಯಲ್ಲಿ ಸಿಕ್ಕ ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಇದನ್ನೂ ಓದಿ: ಮಂಗಳೂರು | ಜು.23ರಂದು ಲೋಕಾಯುಕ್ತ ಜನಸಂಪರ್ಕ ಸಭೆ

ವನ್ಯಜೀವಿ ಸಂರಕ್ಷಣ ಕಾಯ್ದೆ 1972ರ ಅನುಸೂಚಿತ (ಶೆಡ್ಯೂಲ್ 1) ಭಾಗ ಸಿ ಯಡಿ ಪ್ರಾಣಿಯಾದ ಇಂಡಿಯನ್ ರಾಕ್ ಪೈಥಾನ್ (ಹೆಬ್ಬಾವು)ಅನ್ನು ಹೊರ ದೇಶ ಅಂದರೆ ಬರ್ಮಿಸ್ ಬಾಲ್ ಪೈಥಾನ್ ಎಂದು ಮಾರಾಟ ಮಾಡುತ್ತಿದ್ದರು. ವನ್ಯ ಜೀವಿ ಸಂರಕ್ಷಣ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಜಾಲಕ್ಕೆ ತಮಿಳುನಾಡುವರೆಗೆ ಸಂಪರ್ಕವಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X