ಬೀದರ್‌ | ʼಗೃಹ ಆರೋಗ್ಯʼ ಯೋಜನೆಗೆ ಚಾಲನೆ; ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ : ಸಚಿವ ಈಶ್ವರ ಖಂಡ್ರೆ

Date:

Advertisements

ಗೃಹ ಆರೋಗ್ಯ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು.

ಶುಕ್ರವಾರ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಲ್ಲಾ ಅಸಾಂಕ್ರಮಿಕ ನಿಯಂತ್ರಣ ಕೋಶ ಇವರ ಸಹಯೋಗದಲ್ಲಿ ನಡೆದ ಗೃಹ ಆರೋಗ್ಯ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ʼಆರೋಗ್ಯ ಸೇವೆ, ಮನೆ-ಮನೆಗೆ ಎಂಬ ಧ್ಯೇಯದಲ್ಲಿ 14 ಅಸಾಂಕ್ರಮಿಕ ರೋಗಗಳಾದ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ , ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್, ಡಯಾಬಿಟಿಕ್ ಪೂಟ್, ಡಯಾಬಿಟಿಕ್ ರೆಟಿನೋಪತಿ, ಮಾನಸಿಕ ಆರೋಗ್ಯ ಅಸ್ವಸ್ಥತೆಗಳು, ನರವೈಜ್ಞಾನಿಕ ಸಮಸ್ಯೆಗಳು, ನಿದ್ರೆಯಲ್ಲಿ ಉಸಿರುಗಟ್ಟುವಿಕೆ, ಧೀರ್ಘಕಾಲದ ಮೂತ್ರಪಿಂಡ ಕಾಯಿಲೆ, ದೀರ್ಘಕಾಲದ ಶ್ವಾಸಕೋಶದ ಕಾಯಿಲೆ, ಲಿವರ್ ಕಾಯಿಲೆ , ರಕ್ತಹೀನತೆ ಆರೋಗ್ಯ ಸಮಸ್ಯೆಗಳು ಇರುವ 30 ವರ್ಷ ಮೇಲ್ಪಟ್ಟವರಿಗೆ ಉಚಿತ ತಪಾಸಣೆ, ಚಿಕಿತ್ಸೆ ಮತ್ತು ಅನುಸರಿಸಬೇಕಾದ ವಿಧಾನದ ಬಗ್ಗೆ ಈ ಯೋಜನೆಯ ಮನೆ-ಮನೆಗೆ ಭೇಟಿ ನೀಡುವುದರ ಮೂಲಕ ಸೇವೆ ಒದಗಿಸಲಾಗುವುದುʼ ಎಂದರು.

Advertisements

ʼನಮ್ಮ ಸರ್ಕಾರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಮತ್ತು ರೋಗಿಗಳ ನಿಯಂತ್ರಣಕ್ಕೆ ಹೆಚ್ಚು ಕ್ರಮ ಕೈಗೊಳ್ಳುತ್ತಿದೆ. ಇಂದಿನ ಪರಿಸರ ಮಾಲಿನ್ಯದಿಂದ ಆಹಾರ, ನೀರು, ಗಾಳಿ ಮಲೀನವಾಗುತ್ತಿದೆ, ಬದಲಾದ ಜೀವನ ಶೈಲಿ, ಒತ್ತಡದ ಜೀವನ ಮತ್ತು ದುಶ್ಚಟಗಳಿಂದ ಆರೋಗ್ಯದ ಮೇಲೆ ಪರಿಣಾಮ ಬೀರಿ ರೋಗಗಳಿಗೆ ಅನುವು ಮಾಡಿಕೊಡುತ್ತಿದೆ ಮತ್ತು ನಗರೀಕರಣ, ಕೈಗಾರೀಕರಣಗಳು ಕೂಡ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿವೆʼ ಎಂದರು .

ʼಯುವಕರ ಶಾರೀರಿಕ ಸದೃಢತೆ ಇಲ್ಲದೆ ಇರುವುದು, ಮಕ್ಕಳಲ್ಲಿ ಅನಾಮಿಯಾ, ತೂಕ ಕಡಿಮೆ, ಬೆಳವಣಿಗೆ ಕುಂಠಿತ, ಜೀವನಾಯುಷ್ಯ ಕಡಿಮೆ ಮುಂತಾದ ಆರೋಗ್ಯ ಸಮಸ್ಯೆಗಳು ಕಾಣಬಹುದು. ಅಸಾಂಕ್ರಮಿಕ ರೋಗಗಳಿಂದ ಶೇ 60 ರಿಂದ 65ರಷ್ಟು ಜನರು ಮರಣ ಹೊಂದುತ್ತಿದ್ದಾರೆ ಎಂದು ಸಮೀಕ್ಷೆಗಳು ತಿಳಿಸುತ್ತಿವೆ. ಆದ್ದರಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ವೈದ್ಯರು, ಆಯುಷ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಇದರಲ್ಲಿ ಪಾತ್ರ ಬಹಳ ದೊಡ್ಡದು, ಮನೆ-ಮನೆಗೆ ಭೇಟಿ ನೀಡಿ ಶೇ.100ರಷ್ಟು ಸಾಧನೆ ಮಾಡಬೇಕುʼ ಎಂದರು.

ಇದನ್ನೂ ಓದಿ : ಬೀದರ್‌ | ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಅಹಮದುದ್ದಿನ್, ಜಿಲ್ಲಾ ಸರ್ವೇಕ್ಷಣಾ ಆಧಿಕಾರಿ ಶಂಕ್ರಪ್ಪಾ ಬೊಮ್ಮಾ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ನರ್ಸ್‌ಗಳು, ಟೆಕ್ನಿಷಿಯನ್ ಗಳು ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X