ಬೀದರ್‌ | ಕರ್ಕಶ ಶಬ್ದದ ಸೈಲೆನ್ಸರ್‌ ಅಳವಡಿಸಿದರೆ ನಿರ್ದಾಕ್ಷಿಣ್ಯ ಕ್ರಮ; ಎಸ್‌ಪಿ ಸೂಚನೆ

Date:

Advertisements

ದ್ವಿಚಕ್ರ ವಾಹನದ ಸೈಲೆನ್ಸರ್‌ನಿಂದ ಅಧಿಕ ಮತ್ತು ಕರ್ಕಶ ಶಬ್ದ ಮಾಡುವ ವಾಹನಗಳನ್ನು ಸೀಜ್ ಮಾಡಿ ಆ ವಾಹನಗಳ 61 ಸೈಲೆನ್ಸರ್‌ ತೆಗೆದು ಬುಲ್ಡೋಜರ್ ಮೂಲಕ ನಿಷ್ಕ್ರಿಯಗೊಳಿಸಿದ್ದೇವೆ. ವಾಹನಗಳಿಗೆ ಹೆಚ್ಚು ಶಬ್ಧ ಬರುವ ಸೈಲೆನ್ಸರ್‌ ಅಳವಡಿಸಿದರೆ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ನಗರದ ಗ್ಯಾರೇಜ್ ಮಾಲೀಕರಿಗೆ ಈಗಾಗಲೇ ಈ ಕುರಿತು ಎಚ್ಚರಿಕೆ ನೀಡಲಾಗಿದೆ ಎಂದು ಬೀದರ್ ಜಿಲ್ಲಾ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ ಎಲ್ ತಿಳಿಸಿದರು.

ಬೀದರ್ ನಗರದ ಡಾ.‌ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಪೊಲೀಸರು ಹಮ್ಮಿಕೊಂಡಿದ್ದ ಹೆಲ್ಮೆಟ್ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. “ಸಾರ್ವಜನಿಕರು ತಮ್ಮ ಅಮೂಲ್ಯವಾದ ಜೀವ ರಕ್ಷಣೆಗೆ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಮತ್ತು ಕಾರು ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸುವುದನ್ನು ಮರೆಯಬಾರದು” ಎಂದು ಹೇಳಿದರು.

“ಕಳೆದ ವರ್ಷ ರಸ್ತೆ ಅಪಘಾತದಿಂದ 332 ಮಂದಿ ಮೃತಪಟ್ಟಿದ್ದಾರೆ. ಈ ಬಗ್ಗೆ ಪೊಲೀಸ್ ತಂಡ ವಿಶ್ಲೇಷಣೆ ಮಾಡಿದಾಗ ಹೆಲ್ಮೆಟ್ ಧರಿಸದೇ ಚಾಲನೆ ಮಾಡಿದ ಮತ್ತು ಕಾರು ಚಾಲನೆ ಮಾಡುವಾಗ ಸಿಟ್ ಬೆಲ್ಟ್ ಹಾಕದೇ ಇರುವುದಕ್ಕೆ ಈ ಅಪಘಾತಗಳು ಸಂಭವಿಸಿವೆ. ಈ ಬಗ್ಗೆ ಹೆಚ್ಚಿನ ಕಾಳಜಿವಹಿಸಿದ್ದು, ಸಾರ್ವಜನಿಕರಲ್ಲಿ ಹಾಗೂ ಶಾಲೆ-ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಲ್ಮೆಟ್ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಹೆಲ್ಮೆಟ್ ಧರಿಸದೇ ಚಾಲನೆ ಮಾಡುವವರಿಗೆ ದಂಡ ಹಾಕುವ ಬದಲಾಗಿ ಆ ದಂಡದ ಮೊತ್ತದಲ್ಲಿ ಹೆಲ್ಮೆಟ್ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ನಿಷೇಧಿತ ಮಾದಕ ವಸ್ತು ʼಚರಸ್ʼ ಸಾಗಾಟ; ಕಾರು ಸಹಿತ ಆರೋಪಿ ಬಂಧನ

“ಬೀದರ್ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಹೆಲ್ಮೆಟ್ ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದೇವೆ. ಹೆಲ್ಮೆಟ್ ಧರಿಸಿದವರನ್ನು ಕರೆಯಿಸಿ ನಗರದಲ್ಲಿ ನಡೆದ ರಸ್ತೆ ಅಪಘಾತ ಸಿಸಿಟಿವಿ ಫೂಟೇಜ್ ತೆಗೆದು ಅದರ ತುಣುಕಗಳ ವಿಡಿಯೋ ತೋರಿಸುವುದರ ಮೂಲಕ ಜನರಲ್ಲಿ ಜಾಗೃತಿ ಮೂಢಿಸಲಾಗುತ್ತಿದೆ. ಇನ್ನು ಮುಂದೆ ಹೆಲ್ಮೆಟ್ ಧರಿಸದೆ ಚಾಲನೆ ಮಾಡುವುದಿಲ್ಲವೆಂದು ಸಾರ್ವಜನಿಕರಿಂದ ಶಪಥ ಮಾಡಿಸಲಾಗುತ್ತಿದೆ” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕ ಕೆ‌ ಎಂ ಸತೀಶ, ಗಾಂಧಿಗಂಜ್ ಪೊಲೀಸ್ ಠಾಣೆಯ ಸಿಪಿಐ ಹನುಮರೆಡ್ಡೆಪ್ಪಾ, ನ್ಯೂಟೌನ್‌ ಪೊಲೀಸ್ ಠಾಣೆಯ ಸಿಪಿಐ ವೆಂಕಟೇಶ, ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಕಪೀಲದೇವ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X