ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯ ಪೊಲೀಸ್ ಕ್ವಾಟ್ರಸ್ ನಲ್ಲಿ ನೇಣು ಬಿಗಿದುಕೊಂಡು ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.
ಮೃತ ವ್ಯಕ್ತಿ ಕಾಂತರಾಜ್ (45), ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್‌ಟೇಬಲ್. ಎಸ್ಪಿ ಕಚೇರಿಯಲ್ಲಿ ಕಂಪ್ಯೂಟರ್ ಸೆಕ್ಷನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾಂತರಾಜ್ ಅಪಘಾತದಲ್ಲಿ ಬಲಗಾಲು ಕಳೆದುಕೊಂಡು ಕೃತಕ ಕಾಲು ಜೋಡಣೆ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದರು. ಅಪಘಾತದಲ್ಲಿ ಕಾಲು ಕಳೆದು ಕೊಂಡಾಗಿನಿಂದ ಮಾನಸಿಕವಾಗಿ ಖಿನ್ನತೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಈ ಹಿಂದೆ ನಕ್ಸಲ್ ನಿಗ್ರಹ ಪಡೆ ಹಾಗೂ ಕಳಸ ಠಾಣೆಯಲ್ಲಿ ಕಾಂತರಾಜ್ ಕರ್ತವ್ಯ ನಿರ್ವಹಿಸಿದ್ದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಭೂಮಿ, ವಸತಿ ಹಕ್ಕಿಗಾಗಿ ಹಕ್ಕೋತ್ತಾಯ: ದಸಂಸ ಪ್ರತಿಭಟನೆ
ಕಾಂತರಾಜ್ ಕುಟುಂಬಸ್ಥರು ಊರಿಗೆ ತೆರಳಿದ್ದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.ಈ ಘಟನೆ ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.