ಬೆಂಗಳೂರಿಗೆ ವಿಜ್ಞಾನ ನಗರ ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಚಿವ ಬೋಸರಾಜು ಮನವಿ

Date:

Advertisements
  • ಕೇಂದ್ರ ಸಚಿವ ಜಿ.ಕಿಶನ್‌ ರೆಡ್ಡಿ ಭೇಟಿ ಮಾಡಿ ಮನವಿ ಸಲ್ಲಿಕೆ
  • ಬೆಂಗಳೂರಿನಲ್ಲಿ ಸೈನ್ಸ್‌ ಸಿಟಿ ಸ್ಥಾಪಿಸಲು ಕ್ರಮಕೈಗೊಳ್ಳಿ: ಮನವಿ

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಮುಖ ನಗರವಾಗಿ ಹೊರ ಹೊಮ್ಮಿರುವ ಬೆಂಗಳೂರಿನಲ್ಲಿ ವಿಜ್ಞಾನ ನಗರ [ಸೈನ್ಸ್‌ ಸಿಟಿ] ಸ್ಥಾಪಿಸಲು ಕ್ರಮಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಬೋಸರಾಜು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಗುರುವಾರ ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಜಿ.ಕಿಶನ್‌ ರೆಡ್ಡಿ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು.

ಬೆಂಗಳೂರು ಪ್ರಮುಖ ನಗರವಾಗಿದ್ದು, ಭಾರತೀಯ ವಿಜ್ಞಾನ ಮಂದಿರ, ಜೆ.ಎನ್.ಸಿ.ಎ.ಎಸ್.ಆರ್‌, ರಾಮನ್‌ ಸಂಶೋಧನಾ ಸಂಸ್ಥೆ, 400 ಕ್ಕೂ ಅಧಿಕ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯೋಗಾಲಯಗಳು, ಐಟಿ-ಬಿಟಿ ಪಾರ್ಕ್‌ ಗಳಿವೆ. ಇತ್ತೀಚೆಗೆ ವಿಜ್ಞಾನ ಗ್ಯಾಲರಿಯನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಾಗಿದೆ” ಎಂದು ಕೇಂದ್ರದ ಗಮನಕ್ಕೆ ತಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಜೀವಕ್ಕೆ ಕಂಟಕ ತರುತ್ತಿರುವ ಜೀವಜಲ; ಆಡಳಿತಶಾಹಿಯೇ ಹೊಣೆ

ಕರ್ನಾಟಕ ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ಅದಕ್ಕೆ ಹೊಂದಿಕೊಂಡಿರುವ ರಾಮನಗರದಲ್ಲಿದ್ದು, ಈ ಪ್ರದೇಶದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯ ಪ್ರಯೋಜನದ ದೃಷ್ಟಿಯಿಂದ ಹಾಗೂ ಶೈಕ್ಷಣಿಕವಾಗಿ ವಿದ್ಯಾರ್ಥಿಗಳು, ತಂತ್ರಜ್ಞರು, ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರಿಗೆ ವಿಜ್ಞಾನ ನಗರ ಮಂಜೂರು ಮಾಡುವಂತೆ ಕೋರಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಟಗರಿ –3 ವಿಜ್ಞಾನ ಕೇಂದ್ರ, 8 ಮೀಟರ್ ಅಗಲದ ಟೈಪ್ – ಬಿ ಡಿಜಿಟಲ್ ಡೋಮ್ ಪ್ಲಾನೇಟೋರಿಯಮ್ ಮತ್ತು ರಾಯಚೂರು ಜಿಲ್ಲೆಯಲ್ಲಿ 22.25 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೆಟಗರಿ – 2, ಟೈಪ್ ಬಿ ವಿಜ್ಞಾನ ಕೇಂದ್ರ ಸ್ಥಾಪನೆ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಟೈಪ್ ಬಿ ಕೆಟಗರಿ – 3 ವಿಜ್ಞಾನ ಕೇಂದ್ರ ಸ್ಥಾಪನೆಯ ಪ್ರಸ್ತಾಪಗಳನ್ನ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗಳಿಗೆ ಶೀಘ್ರದಲ್ಲಿ ಒಪ್ಪಿಗೆ ನೀಡುವ ಭರವಸೆಯನ್ನ ಕೇಂದ್ರ ಸಚಿವರು ನೀಡಿದ್ದಾರೆ ಎಂದು ಎನ್ ಎಸ್ ಬೋಸರಾಜು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X