ಕಾರೊಂದು ಸೇತುವೆಯ ಪಕ್ಕದಲ್ಲಿರುವ ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿ ಹೊಡೆದು ಹೊತ್ತಿ ಉರಿದು ಕಾರಿನಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಂಕೇರ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಲ್‌ಗಾವ್ ಬಳಿ ಬೆಳಗಿನ ಜಾವ 1.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆಯ ಸಮಯದಲ್ಲಿ ಮೃತರು ಕುಡಿದ ಮತ್ತಿನಲ್ಲಿದ್ದರು ಎಂದು ಪ್ರಾಥಮಿಕ ವರದಿ ಹೇಳಿದೆ.
ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ಭೀಕರ ಅಪಘಾತ; ತಂದೆ, ಮಗಳು ಸಾವು, ತಾಯಿ ಸ್ಥಿತಿ ಗಂಭೀರ
ಕಾರು ಚಾಲಕ ದೀಪಕ್ ಮರಾವಿ (19), ಸೂರಜ್ ಉಯಿಕೆ (19), ಯುವರಾಜ್ ಸೋರಿ (24) ಮತ್ತು ಹೇಮಂತ್ ಸೋರಿ (20) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರೀತಮ್ ನೇತಮ್ ಮತ್ತು ಪೃಥ್ವಿರಾಜ್ ಸಲಾಂ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ತಂಡ ತಲುಪಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ.
