ಬಸವಕಲ್ಯಾಣ | ದಲಿತರ ಭೂಮಿ-ವಸತಿ ಹಕ್ಕಿಗಾಗಿ ದಸಂಸ ಪ್ರತಿಭಟನಾ ಧರಣಿ

Date:

Advertisements

ದಲಿತರ ಭೂಮಿ-ವಸತಿ ಹಕ್ಕಿಗಾಗಿ ಮತ್ತು ಬಸವಕಲ್ಯಾಣ ತಾಲ್ಲೂಕಿನ ಇತರೆ ಹಕ್ಕೊತ್ತಾಯಗಳಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ತಾಲ್ಲೂಕು ಘಟಕದ ಪದಾಧಿಕಾರಿಗಳು ನಗರದ ತಹಶೀಲ್ದಾರ್‌ ಕಚೇರಿ ಎದುರು ಶುಕ್ರವಾರ ಧರಣಿ ನಡೆಸಿದರು.

‘ರಾಜ್ಯದ ಒಟ್ಟು ಭೂಮಿಯಲ್ಲಿ ದಲಿತರು ಶೇ 11ರಷ್ಟು ಮಾತ್ರ ಭೂಮಿ ಹೊಂದಿದ್ದಾರೆ. ಈ ಪೈಕಿ ನೀರಾವರಿ ಭೂಮಿ ಅತ್ಯಲ್ಪವಾಗಿದೆ. ಫಾರಂ 50, 53, 57ರ ಅಡಿ ಅರ್ಜಿ ಸಲ್ಲಿಸಿದ ಬಗರ್‌ ಹುಕುಂ ಸಾಗುವಳಿದಾರರ ಜಮೀನು ಸಕ್ರಮಗೊಳಿಸಬೇಕು. ವಿನಾಕಾರಣ ವಜಾಗೊಳಿಸಿರುವ ಬಗರ್ ಹುಕುಂ ಸಾಗುವಳಿಯ ಅರ್ಜಿಗಳನ್ನು ಮರುಪರಿಶೀಲಿಸಬೇಕು’ ಎಂದರು.

‘ಹೈಕೋರ್ಟ್‌ಗಳಲ್ಲಿ ಪಿ.ಟಿ.ಸಿ.ಎಲ್‌ ಪ್ರಕರಣಗಳು ವಜಾಗೊಳ್ಳುತ್ತಿದ್ದು, ನುರಿತ ವಕೀಲರನ್ನು ನೇಮಿಸಿ ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣ ನಿರ್ವಹಣೆಗೆ ಸರ್ಕಾರ ಸ್ಥಾಪಿಸಿರುವ ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ಅಗತ್ಯ ಸಿಬ್ಬಂದಿ ಮತ್ತು ಮೂಲಸೌಕರ್ಯ ಒದಗಿಸಬೇಕು’ ಎಂದರು.

Advertisements

70ರ ದಶಕದಲ್ಲಿ ಬಿ.ಬಸವಲಿಂಗಪ್ಪನವರ ದೂರದೃಷ್ಟಿಯ ಫಲದಿಂದ ಪಿಟಿಸಿಎಲ್ ಕಾಯ್ದೆ ಜಾರಿಗೆ ಬಂದರೂ ಸಹ ಜಾತಿವಾದಿಗಳು ಹಾಗೂ ಅಧಿಕಾರ ಶಾಹಿ ಕುತಂತ್ರದಿಂದ ಸರ್ಕಾರವು ಪಿಟಿಸಿಎಲ್ ಜಮೀನುಗಳ ಪ್ರಕರಣದಲ್ಲಿ ದಲಿತ ಸಮುದಾಯಗಳು ಕೋರ್ಟ್‌ಗೆ ಅಲೆದಾಡಿ ವಂಚನೆಗೆ ಒಳಗಾಗಿದ್ದಾರೆʼ ಎಂದು ದೂರಿದರು.

ʼಫಾರಂ 50, 53, 57ರ ಅಡಿ ಅರ್ಜಿ ಸಲ್ಲಿಸಿದ ಬಗರ್‌ ಹುಕುಂ ಸಾಗುವಳಿದಾರರ ಜಮೀನು ಸಕ್ರಮಗೊಳಿಸಬೇಕು. ವಿನಾಕಾರಣ ವಜಾಗೊಳಿಸಿರುವ ಬಗರ್ ಹುಕುಂ ಸಾಗುವಳಿಯ ಅರ್ಜಿಗಳನ್ನು ಮರುಪರಿಶೀಲಿಸಬೇಕು. ಹೈಕೋರ್ಟ್‌ಗಳಲ್ಲಿ ಪಿ.ಟಿ.ಸಿ.ಎಲ್‌ ಪ್ರಕರಣಗಳು ವಜಾಗೊಳ್ಳುತ್ತಿದ್ದು, ನುರಿತ ವಕೀಲರನ್ನು ನೇಮಿಸಿ ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣ ನಿರ್ವಹಣೆಗೆ ಸರ್ಕಾರ ಸ್ಥಾಪಿಸಿರುವ ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ಅಗತ್ಯ ಸಿಬ್ಬಂದಿ ಮತ್ತು ಮೂಲಸೌಕರ್ಯ ಒದಗಿಸಬೇಕು’ ಎಂದರು.

ಹುಲಸೂರ ತಾಲ್ಲೂಕಿನ ಕೋಟಮಾಳ, ತೊಗಲೂರು ಗ್ರಾಮದಲ್ಲಿ ಸ್ಮಶಾನ ಭೂಮಿ ಮಂಜೂರು ಮಾಡಬೇಕು. ಪರಿಶಿಷ್ಟ ಜಾತಿ ಹಾಗೂ ಭೂಹೀನ ತಳಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್‌ ಹುಕುಂ ಸಾಗುವಳಿಯನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕು. ಹುಲಸೂರ ತಾಲ್ಲೂಕಿನ ಮಿರ್ಖಲ್‌ ಹಾಗೂ ಮಿರ್ಖಲ್‌ ತಾಂಡಾ ರೈತರ ಬಳಿ ಪಹಣಿ ಸೇರಿದಂತೆ ಎಲ್ಲ ದಾಖಲೆ ಇದ್ದರೂ ಅರಣ್ಯ ಇಲಾಖೆಯವರು ವಶಕ್ಕೆ ಪಡೆದಿದ್ದು ಸಸಿ ನೆಟ್ಟಿದ್ದು, ಕೂಡಲೇ ಆ ಭೂಮಿ ರೈತರಿಗೆ ಬಿಟ್ಟುಕೊಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

ಇದನ್ನೂ ಓದಿ : ಬೀದರ್‌ ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗೆ ʼಬೀದರ್‌ ದರ್ಶನʼ ವಿಶೇಷ ಬಸ್‌ಗೆ ಚಾಲನೆ

ಪ್ರತಿಭಟನೆಯಲ್ಲಿ ತಾಲೂಕಾ ಸಂಘಟನಾ ಸಂಚಾಲಕ ಪ್ರಶಾಂತ ಸಿಂಧೆ, ರಾಜು ಸೂರ್ಯವಂಶಿ, ಆಕಾಶ, ಸಿದ್ದಾರ್ಥ ಸಿಂಧೆ, ಮಾರುತಿ ಕಾಂಬಳೆ, ಮನೋಜ ಖೆಲೆ, ಜಿಯಾವುದ್ದಿನ್‌ ನಿಲಂಗಿಕರ್‌, ಅಜಯ ಮಚಕೂರಿ, ರೋಹಿತ್‌ ಕಾಂಬಳೆ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X