ರಾಯಚೂರು | ರಸಗೊಬ್ಬರ ಪೂರೈಕೆ ಮಾಡುವಂತೆ ರೈತ ಸಂಘಟನೆ ಒತ್ತಾಯ

Date:

Advertisements

ರಾಜ್ಯದಲ್ಲಿ ಹಲವು ಕಡೆ ಉತ್ತಮ ಮಳೆಯಿಂದಾಗಿ ಎಲ್ಲ ಜಲಾಶಯಗಳು ನೀರಿನ ಕೊರತೆಯಾಗದಂತೆ ತುಂಬಿದೆ. ನೀರಾವರಿ ಪ್ರದೇಶದಲ್ಲಿ ಕೂಡ ತುಂಬಿದ್ದು, ಭತ್ತವನ್ನು ಈಗಾಗಲೇ ನಾಟಿಮಾಡಿದ್ದಾರೆ. ಆದರೆ ಮುಕ್ತ ಮಾರುಕಟ್ಟೆಯಲ್ಲಿ ರಸಗೊಬ್ಬರ ತೆಗೆದುಕೊಳ್ಳಲಿಕ್ಕೆ ರೈತರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿಎಪಿ, ಎನ್‌ಪಿಕೆ, ಯೂರಿಯಾ, ಪೊಟಾಷ್ ರಸಗೊಬ್ಬರ ಅಗತ್ಯಕ್ಕೆ ತಕ್ಕಂತೆ ಪೂರೈಕೆಯಾಗದೆ ಪರದಾಡಬೇಕಿದೆ. ಈಗಾಗಲೇ ಹಲವು ಕಡೆ ಬಿತ್ತನೆ ಮಾಡಿದ್ದಾರೆ. ಕೆಲ ವಾರಗಳಿಂದ ರಸಗೊಬ್ಬರ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ದುಬಾರಿ ಬೆಲೆ ತೆತ್ತು ಇತರೆ ಗೊಬ್ಬರ ಖರೀದಿ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆಗಳು ಭರ್ಜರಿಯಾಗಿ ಸಾಗಿದ್ದು, ಹೆಚ್ಚಾಗಿ ರಸಗೊಬ್ಬರಕ್ಕೆ ಬೇಡಿಕೆಯಿದೆ. ರೈತರು ಮಳಿಗೆಗಳಲ್ಲಿ ಕ್ಯೂ ನಿಂತು ಸಿಕ್ಕಷ್ಟು ರಸಗೊಬ್ಬರ ಖರೀದಿಸುತ್ತಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ವಿವಿಧ ಕೃಷಿಗೆ ರಸಗೊಬ್ಬರ ಖರೀದಿ ಆರಂಭಗೊಂಡಿದ್ದು, ಅಗತ್ಯ ಪ್ರಮಾಣದ ಪೂರೈಕೆಯ ನಿರೀಕ್ಷೆಯಲ್ಲಿ ರೈತರಿದ್ದಾರೆ ಎಂದು ಹೇಳಿದರು.

ಸಹಕಾರ ಸಂಘಗಳು, ರೈತ ಸಂಪರ್ಕ ಕೇಂದ್ರದಲ್ಲಿ ಕಳಪೆ ರಸಗೊಬ್ಬರ ಪೂರೈಕೆ ಮಾಡುತ್ತಿದ್ದಾರೆ. ಇದರಿಂದ ರೈತರು ಆತಂಕದಲ್ಲಿದ್ದಾರೆ. ನಿಗದಿ ಬೆಲೆಗಿಂತ ಅಧಿಕ ಮಾರಾಟ ವಾಗುತ್ತಿದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪ ಮಾಡಿದರು.

ಕೇಂದ್ರ ಸರ್ಕಾರ ನ್ಯಾನೋ ತಂತ್ರಜ್ಞಾನ ಪರಿಚಯಿಸಿದೆ. ಇದರ ಬಗ್ಗೆ ಕೃಷಿ ವಿಜ್ಞಾನಿಗಳು ರೈತರಿಗೆ ಮಾಹಿತಿಯನ್ನು ನೀಡಬೇಕು. ಸಂಸದರು ಸಂಸತ್ತಿನಲ್ಲಿ ರಸಗೊಬ್ಬರ ಬಗ್ಗೆ ಧ್ವನಿ ಪ್ರಸ್ತಾಪ ಮಾಡಬೇಕು. ಅದರ ಜೊತೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಬೇಕು. ರೈತರು ಪ್ರತಿ ಬಾರಿ ಬೀದಿಗಳಿದು ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ. ನೀರಾವರಿಯ ಉಪ ಕಾಲುವೆ ದುರಸ್ತಿ ಮಾಡಲು ಮುಂದಾಗಬೇಕು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಾವು ಕಡಿತ 4 ವರ್ಷದ ಬಾಲಕಿ ಸಾವು

ಪತ್ರಿಕಾಗೋಷ್ಠಿಯಲ್ಲಿ ಹನುಮೇಶ ನಾಯಕ, ಪ್ರಭಾಕರ್ ಪಾಟೀಲ, ಶಂಕರ ಗೌಡ, ಬಸವರಾಜ ನವಲಕಲ್, ಬೂದಯ್ಯ ಸ್ವಾಮಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

Download Eedina App Android / iOS

X