ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ.
ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.
ಅನಿಲ್ ಕುಮಾರ್ ಭೂಮರೆಡ್ಡಿ ಅವರು 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪಿಎಸ್‌ಐ, ಸರ್ಕಲ್ ಇನ್ಸ್‌ಪೆಕ್ಟರ್ ಮತ್ತು ಪೊಲೀಸ್ ಉಪ ವರಿಷ್ಠಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ.
ಇವರು ಕಳೆದ 30 ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ 2024 ರಲ್ಲಿ ರಾಷ್ಟ್ರಪತಿ ಪದಕ ನೀಡಿ ಗೌರವಿಸಲಾಗಿದೆ.