ಹಾಸನ | ವನಮಹೋತ್ಸವ ಕಾರ್ಯಕ್ರಮ: ಗಿಡ ನೆಟ್ಟು ಪರಿಸರ ಉಳಿಸಲು ಶಾಸಕ ಸ್ವರೂಪ್ ಪ್ರಕಾಶ್ ಕರೆ

Date:

Advertisements

ಮಾಲಿನ್ಯದತ್ತ ಸಾಗುತ್ತಿರುವ ಪ್ರಕೃತಿಯನ್ನು ರಕ್ಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಪ್ರತಿ ಮನೆ ಮನೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಕಲುಷಿತ ವಾತಾವರಣವನ್ನು ಬಗ್ಗು ಬಡಿದು ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಶಾಸಕ ಸ್ವರೂಪ್‌ ಪ್ರಕಾಶ್‌ ಕರೆ ನೀಡಿದರು.

ಹಾಸನ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯಿತಿ, ಯಗಚಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಎಕೋ ಕ್ಲಬ್ ವತಿಯಿಂದ ಎಗಚಿ ಪ್ರೌಢಶಾಲೆ ಆವರಣದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಮೊದಲೆಲ್ಲ ಎಲ್ಲೆಂದರಲ್ಲಿ ಹಣ್ಣಿನ ಹೂವಿನ ಗಿಡಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಮರ-ಗಿಡಗಳು ಮಾಯವಾಗುತ್ತಿವೆ. ಆದುದರಿಂದ ಮುಂದಿನ ಪೀಳಿಗೆಗೆ ಸುಂದರ ಪರಿಸರ ಉಳಿಸಲು ಎಲ್ಲರೂ ಹಣ್ಣಿನ ಗಿಡಗಳನ್ನು ನೆಟ್ಟು ಪೋಷಿಸಬೇಕು” ಎಂದರು.

ಕಾರ್ಯಕ್ರಮಕ್ಕೂ ಮೊದಲು ಶಾಲೆಯ ಆವರಣದಲ್ಲಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರ ಸಹಯೋಗದಲ್ಲಿ ಸಸಿಗಳನ್ನು ನೆಡುವ ಮೂಲಕ ಹಸಿರು ಉಳಿಸಿ ಪ್ರಕೃತಿ ಬೆಳೆಸಿ ಎಂಬ ಸಂದೇಶ ಸಾರುವ ಮೂಲಕ ಪೌಷ್ಟಿಕವನ ನಿರ್ಮಾಣ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಅಕ್ರಮವಾಗಿ ಗಣಿಗಾರಿಕೆ: ರಾಜಕೀಯ ಒತ್ತಡಕ್ಕೆ ಮಣಿಯದೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ

ಪರಿಸರ ಸಂರಕ್ಷಣೆ ಸಲುವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹೀಗೆ ವಿವಿಧ ಸಂಘ ಸಂಸ್ಥೆಗಳು ಕೆಲಸ ಮಾಡುತ್ತಿವೆ. ಅವರಂತೆ ಎಲ್ಲರೂ ಪರಿಸರ ಕಾಳಜಿ ಹೊಂದುವ ಮೂಲಕ ಪರಿಸರ ರಕ್ಷಣೆಗೆ ಮುಂದಾಗೋಣ ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X