ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿರುವ ಹಿನ್ನೆಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಕೆ ಸೂಚನೆ ನೀಡಿದ್ದಾರೆ.
ಇಂದು (ಜು.20) ಹಾಗೂ ಮುಂದಿನ 24 ಗಂಟೆಗಳಲ್ಲಿ ಹಠಾತ್ ಪ್ರವಾಹದ ಅಪಾಯ ಇರುವುದರಿಂದ ಸಂಪೂರ್ಣವಾಗಿ ನ್ಯಾಚುರೇಟೆಡ್ ಮಣ್ಣು ಮತ್ತು ಕಳವಳಕಾರಿ ಪ್ರದೇಶದ ತಗ್ಗು ಪ್ರದೇಶಗಳಲ್ಲಿ ಮೇಲ್ಮೈ ಹರಿವು /ಮುಳುಗಡೆ ಸಂಭವಿಸಬಹುದೆಂದು ಮುನ್ಸೂಚನೆ ನೀಡಲಾಗಿರುವುದರಿಂದ ಕೆಳಗಿನಂತೆ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ.
ಸಾರ್ವಜನಿಕರು ಸಮುದ್ರ ಪ್ರದೇಶಗಳಿಗೆ ಹೋಗಬಾರದು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ, ನೀರಿನ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರವಹಿಸುವುದು. ನದಿ ತೀರದಲ್ಲಿ ವಾಸಿಸುವವರು ಹಠಾತ್ ಪ್ರವಾಹದ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳುವುದು. ಅಘನಾಶಿನಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಬಗ್ಗೆ ಕೇಂದ್ರಿಯ ಜಲ ಆಯೋಗ ಮುನ್ಸೂಚನೆಯನ್ನು ನೀಡಿರುತ್ತದೆ. ಗುಡ್ಡದ ಇಳಿಜಾರಿನ ಪ್ರದೇಶದಲ್ಲಿ ವಾಸಿಸುವರು ಕೂಡಾ ಮಳೆಯ ತೀವ್ರತೆಯನುಸಾರ ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು ಮತ್ತು ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದು.
ಇದನ್ನೂ ಓದಿ: ಉತ್ತರ ಕನ್ನಡ | ಭಟ್ಕಳಕ್ಕೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವತಿ ನಾಪತ್ತೆ
ತುರ್ತು ಸೇವೆಗೆ 24*7 ಕಂಟ್ರೋಲ್ ರೂಮ್ ಟೋಲ್ ಫ್ರೀ ಸಂಖ್ಯೆ 08382-229857 ಮತ್ತು ವಾಟ್ಸಪ್ ಸಂಖ್ಯೆ 9483511015 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.