ಉತ್ತರ ಕನ್ನಡ | ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ; ಇಬ್ಬರ ಬಂಧನ, 40 ಕ್ವಿಂಟಲ್ ಅಕ್ಕಿ ಜಪ್ತಿ

Date:

Advertisements

ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಇಬ್ಬರನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 40 ಕ್ವಿಂಟಾಲ್ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ.

ಶಿರಸಿಯ ಚಿಪಗಿ ನರೆಬೈಲ್ ನಿವಾಸಿ ಉಬೇದ್ ಅಲಿಯಾಸ್ ಸಲೀಂ ಜವಳಿ ಎಂಬಾತ ಬಿಪಿಎಲ್ ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಅನ್ನಭಾಗ್ಯ ಯೋಜನೆಯ 40 ಕ್ವಿಂಟಲ್ ಅಕ್ಕಿಯನ್ನು ಖರೀದಿಸಿ, ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದನು. ಈ ಅಕ್ಕಿಯನ್ನು ಇಸಳೂರು ಗ್ರಾಮದ ಶಿರಸಿ ನಿವಾಸಿ ಸುನೀಲ ಮಹಾದೇವಪ್ಪ ನಾಡಗಿ ಎಂಬಾತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಖರೀದಿಸಿದ್ದನು.

ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ಟಾಟಾ ಕಂಪನಿಯ 407 ವಾಹನದಲ್ಲಿ ಈ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಿಕೊಂಡು ಹೋಗುತ್ತಿದ್ದಾಗ, ಶಿರಸಿಯ ಮಂಗಳೂರು ಹೋಟೆಲ್ ಕ್ರಾಸ್ ಬಳಿ ಪೊಲೀಸರು ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Advertisements

ಬಂಧಿತರನ್ನು ಸುನೀಲ್ ಮಹಾದೇವಪ್ಪ ನಾಡಗಿ (ಈಸಳೂರು, ಶಿರಸಿ) ಮತ್ತು ಅಲ್ತಾಫ್ ರೆಹಮತ್ ಉಲ್ಲಾ ಶೇಖ್ (ಕಸ್ತೂರ ಬಾ ನಗರ, ಶಿರಸಿ) ಎಂದು ಗುರುತಿಸಲಾಗಿದೆ. ಬಂಧಿತರಿಂದ ಅಂದಾಜು ₹1,36,000 ಬೆಲೆ ಬಾಳುವ 40 ಕ್ವಿಂಟಾಲ್ (50 ಕೆ.ಜಿ. ತೂಕದ 80 ಚೀಲ) ಪಡಿತರ ಅಕ್ಕಿ ಹಾಗೂ ಅಕ್ರಮ ಸಾಗಾಟಕ್ಕೆ ಬಳಸಿದ್ದ ಅಂದಾಜು ₹4,50,000 ಮೌಲ್ಯದ ಟಾಟಾ 407 ವಾಹನವನ್ನು ಜಪ್ತಿ ಮಾಡಲಾಗಿದೆ. ಒಟ್ಟು ₹5,86,000 ಮೌಲ್ಯದ ಸ್ವತ್ತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ | ರೈತನ ಮೇಲೆ ಕರಡಿ ದಾಳಿ

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿ. ಕೃಷ್ಣಮೂರ್ತಿ, ಜಗದೀಶ್ ನಾಯ್ಕ್ ಹಾಗೂ ಶಿರಸಿ ಉಪವಿಭಾಗದ ಡಿವೈಎಸ್‌ಪಿ ಗೀತಾ ಪಾಟೀಲ್, ವೃತ್ತ ನಿರೀಕ್ಷಕರಾದ ಶಶಿಕಾಂತ ವರ್ಮಾ, ಶಿರಸಿ ತಹಶೀಲ್ದಾರ್ ಪುಟ್ಟರಾಜಗೌಡ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯಲ್ಲಿ
ಶಿರಸಿ ನಗರ ಠಾಣೆಯ ಪಿಎಸ್‌ಐ ನಾಗಪ್ಪ ಬಿ., ಆಹಾರ ನಿರೀಕ್ಷಕರಾದ ಕವಿತಾ ಪಾಟನಕರ್, ಸಿಬ್ಬಂದಿಗಳಾದ ಸದ್ದಾಂ ಹುಸೇನ್, ಚನ್ನಬಸಪ್ಪ ಕ್ಯಾರಕಟ್ಟಿ, ಹನುಮಂತ ಕಬಾಡಿ, ಸುದರ್ಶನ ನಾಯ್ಕ, ಸುನೀಲ್ ಹಂಡಲಗಿ, ರಾಜಶೇಖರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X