ಧರ್ಮಸ್ಥಳದಲ್ಲಿ ಸರಣಿ ಹತ್ಯೆ: ಪ್ರಕರಣಗಳ ಸಮಗ್ರ ತನಿಖೆಗೆ SIT ರಚಿಸಿದ ಸರ್ಕಾರ

Date:

Advertisements

ಧರ್ಮಸ್ಥಳದಲ್ಲಿ ನೂರಾರು ಹತ್ಯೆಗಳು, ಅತ್ಯಾಚಾರಗಳು ನಡೆದಿದ್ದು, ಮೃತದೇಹಗಳನ್ನು ಗೌಪ್ಯವಾಗಿ ಹೂತು ಹಾಕಲಾಗಿದೆ ಎಂಬ ಆರೋಪದ ಮೇಲೆ ದಾಖಲಾಗಿರುವ ಎಲ್ಲ ಪ್ರಕರಣಗಳ ತನಿಖೆಗಾಗಿ ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹಿರಿಯ ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಾಂತಿ ಅವರ ನೇತೃತ್ವದಲ್ಲಿ SIT ರಚನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಎಸ್‌ಐಟಿ ರಚಿಸಿ ಆದೇಶಿಸಿರುವ ಸರ್ಕಾರ, “ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್‌ ಠಾಣೆ ಮತ್ತು ಇತರ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡಲಾಗಿದೆ. ಪ್ರಕರಣ ತನಿಖೆಯನ್ನು ಶೀಘ್ರವೇ ಎಸ್‌ಐಟಿ ಕೈಗೆತ್ತಿಕೊಳ್ಳಲಿದೆ. ಧರ್ಮಸ್ಥಳದಲ್ಲಿನ ಹತ್ಯೆಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ಎಸ್‌ಐಟಿಗೆ ವರ್ಗಾಯಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚಿಸಲಾಗಿದೆ” ಎಂದು ತಿಳಿಸಿದೆ.

“ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಹೂತುಹಾಕಲಾಗಿದ್ದ ವ್ಯಕ್ತಿಯೊಬ್ಬರ ತಲೆಬುರುಡೆಯೊಂದನ್ನು ಆತ ಹೊರತೆಗೆದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದ ಹೇಳಿಕೆಗಳ ವರದಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕ ಸಾವು ಮತ್ತು ನಾಪತ್ತೆ ಪ್ರಕರಣಗಳಲ್ಲಿ ಹಲವು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಬಲಿಯಾಗಿರುವುದಾಗಿ ತಿಳಿಸಲಾಗಿದೆ. ಹೀಗಾಗಿ, ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣಗಳ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಎಸ್‌ಐಟಿ ರಚಿಸಲಾಗಿದೆ” ಎಂದು ಸರ್ಕಾರ ಹೇಳಿದೆ.

ತನಿಖಾ ತಂಡದ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಪ್ರಣವ ಕುಮಾರ್ ಮೊಹಂತಿ ಅವರನ್ನು ನೇಮಿಸಲಾಗಿದೆ. ತಂಡವು IPS ಅಧಿಕಾರಿಗಳಾದ ಎಂ.ಎನ್ ಅನುಚೇತ್, ಸೌಮ್ಯಲತಾ ಹಾಗೂ ಜಿತೇಂದ್ರ ಕುಮಾರ್‌ ಅವರನ್ನು ಒಳಗೊಂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X