ಮಹಾರಾಷ್ಟ್ರ ಕೃಷಿ ಸಚಿವ ಮಾಣಿಕ್ರಾವ್ ಕೊಕಾಟೆ ಅವರು ವಿಧಾನಸಭೆ ಅಧಿವೇಶನದ ಸಮಯದಲ್ಲಿ ಮೊಬೈಲ್‌ನಲ್ಲಿ ರಮ್ಮಿ ಆಡಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋವನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ-ಶರದ್ ಪವಾರ್ ಬಣ) ಶಾಸಕ ರೋಹಿತ್ ಪವಾರ್ ಸೇರಿದಂತೆ ಹಲವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಡಿಯೋದಲ್ಲಿ ಕೃಷಿ ಸಚಿವ ಕೊಕಾಟೆ ಸದನದಲ್ಲಿ ಕುಳಿತು ಮೊಬೈಲ್ ನೋಡುತ್ತಿರುವುದು, ಅದರಲ್ಲಿ ರಮ್ಮಿ ಆಡುತ್ತಿರುವುದು ಕಂಡುಬಂದಿದೆ. “ರೈತರು ಮತ್ತು ಕೃಷಿಯ ಬಗ್ಗೆ ಗಂಭೀರ ಚರ್ಚೆಗಳು ನಡೆಯುತ್ತಿರುವ ಸಮಯದಲ್ಲಿ ರಾಜ್ಯ ಸಚಿವರು ‘ರಮ್ಮಿ’ ಎಂಬ ಆಟವನ್ನು ಆಡುತ್ತಿದ್ದಾರೆ” ಎಂದು ರೋಹಿತ್ ಪವಾರ್ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಕೃಷಿ ಸಚಿವರ ತವರಿನಲ್ಲಿಯೇ ಅತಿ ಹೆಚ್ಚು ರೈತರ ಆತ್ಮಹತ್ಯೆ
ಕೊಕಾಟೆಯನ್ನು ದಾರಿ ತಪ್ಪಿದ ಶಾಸಕ ಎಂದು ರೋಹಿತ್ ಪವಾರ್ ಕರೆದಿದ್ದಾರೆ. ಹಾಗೆಯೇ ರಾಜ್ಯದಲ್ಲಿ ರೈತರ ಆತ್ಮಹತ್ಯೆ, ಕೃಷಿ ಸಮಸ್ಯೆಗಳ ಬಗ್ಗೆ ಸಚಿವರು ಗಮನ ಹರಿಸುತ್ತಿಲ್ಲ ಎಂದು ಕೋಕಾಟೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
“#जंगली_रमी_पे_आओ_ना_महाराज…!”
— Rohit Pawar (@RRPSpeaks) July 20, 2025
सत्तेतल्या राष्ट्रवादी गटाला भाजपला विचारल्याशिवाय काहीच करता येत नाही म्हणूनच शेतीचे असंख्य प्रश्न प्रलंबित असताना, राज्यात रोज ८ शेतकरी आत्महत्या करत असताना सुद्धा काही कामच नसल्याने कृषिमंत्र्यांवर रमी खेळण्याची वेळ येत असावी.
रस्ता भरकटलेल्या… pic.twitter.com/52jz7eTAtq
“ರಾಜ್ಯದಲ್ಲಿ ಪ್ರತಿದಿನ 8 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ, ಅಧಿಕಾರದಲ್ಲಿರುವ ಎನ್‌ಸಿಪಿ ಬಣವು ಬಿಜೆಪಿಯನ್ನು ಸಂಪರ್ಕಿಸದೆ ಏನನ್ನೂ ಮಾಡಲು ಸಾಧ್ಯವಿಲ್ಲದ ಸ್ಥಿತಿಯಲ್ಲಿದೆ. ಲೆಕ್ಕವಿಲ್ಲದಷ್ಟು ಕೃಷಿ ಸಮಸ್ಯೆಗಳು ಬಾಕಿ ಉಳಿದಿದೆ ಮತ್ತು ದಿನನಿತ್ಯ 8 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಕೃಷಿ ಸಚಿವರಿಗೆ ಬೇರೆ ಏನೂ ಮಾಡಲು ಸಾಧ್ಯವಾಗದೆ, ರಮ್ಮಿ ಆಡಲು ಸಮಯ ಸಿಕ್ಕಂತೆ ಕಾಣುತ್ತಿದೆ” ಎಂದು ಮರಾಠಿಯಲ್ಲಿ ಶಾಸಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
“ಈ ದಾರಿ ತಪ್ಪಿದ ಸಚಿವರು ಮತ್ತು ಸರ್ಕಾರವು ಬೆಳೆ ವಿಮೆ, ಸಾಲ ಮನ್ನಾ ಮತ್ತು ಬೆಲೆ ಬೆಂಬಲವನ್ನು ಕೋರುವ ರೈತರ ಹತಾಶ ಮನವಿಯನ್ನು ಎಂದಾದರೂ ಕೇಳುತ್ತದೆಯೇ? ‘ಬಡ ರೈತರ ಹೊಲಗಳಿಗೆ ಕೆಲವೊಮ್ಮೆ ಬನ್ನಿ, ಮಹಾರಾಜ್” ಎಂದು ವ್ಯಂಗ್ಯವಾಡಿದ್ದಾರೆ.
ಈ ಘಟನೆಯು ವಿಪಕ್ಷಗಳಿಂದ ಭಾರೀ ಟೀಕೆಗೆ ಗುರಿಯಾಗಿದೆ. ಸರ್ಕಾರವು ರೈತರ ಸಮಸ್ಯೆಗಳ ಬಗ್ಗೆ ಅಸಡ್ಡೆ ಹೊಂದಿದೆ ಎಂದು ವಿಪಕ್ಷಗಳು ಆರೋಪಿಸಿದೆ. ವೀಡಿಯೊಗೆ ಪ್ರತಿಕ್ರಿಯಿಸಿದ ಶಿವಸೇನೆ (ಯುಬಿಟಿ) ವಕ್ತಾರ ಆನಂದ್ ದುಬೆ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಆದರೆ ಈ ಎಲ್ಲ ಆರೋಪಗಳ ಬಗ್ಗೆ ಸಚಿವ ಕೊಕಾಟೆ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
