ಹಾಸನ | ಧರ್ಮಸ್ಥಳ ಪ್ರಕರಣಗಳ ತನಿಖೆಗೆ ಎಸ್ಐಟಿ; ಸರ್ಕಾರದ ನಿರ್ಣಯಕ್ಕೆ ಡಿವೈಎಫ್‌ಐ ಸ್ವಾಗತ

Date:

Advertisements

ಪ್ರಾರಂಭಿಕ ಹಂತದಲ್ಲೇ ಪ್ರಶ್ನೆಗೆ ಒಳಪಟ್ಟು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದ ಆಸಹಜ ಸಾವುಗಳ ಪ್ರಕರಣದ ತನಿಖೆಗೆ ಎಸ್.ಐ.ಟಿ ರಚಿಸಿರುವ ರಾಜ್ಯ ಸರಕಾರದ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ ಸ್ವಾಗತಿಸುತ್ತದೆ.

80ರ ದಶಕದಲ್ಲಿ ನಡೆದ ಪದ್ಮಲತಾ ಪ್ರಕರಣದ ಸಂದರ್ಭದಿಂದಲೇ ಡಿವೈಎಫ್ಐ ಅಲ್ಲಿನ ವಿದ್ಯಮಾನಗಳಿಗೆ ವಿರೋಧ ವ್ಯಕ್ತಪಡಿಸಿದೆ. ಹಲವು ಹಂತಗಳಲ್ಲಿ ನಡೆದ ಹೋರಾಟಗಳಲ್ಲಿ ಪಾಲ್ಗೊಂಡಿದೆ. ಆ ಹೋರಾಟಗಳ ನಂತರವಷ್ಟೇ ಸಿ.ಬಿ.ಐ. ತನಿಖೆಗೆ ಒಪ್ಪಿಸಲಾಗಿತ್ತು.

ಹಲವು ವರ್ಷಗಳ ಹಿಂದೆ ಪ್ರಕರಣಗಳು ನಡೆದು ಉದ್ದೇಶಪೂರ್ವಕವಾಗಿ ಸಾಕ್ಷಿನಾಶ ಮಾಡಲಾಗಿದೆ ಎಂದೂ ಕುಖ್ಯಾತವಾಗಿದ್ದ ಪ್ರಕರಣಗಳು ಇರುವುದರಿಂದ ಕೂಲಂಕಷವಾದ ತನಿಖೆ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಪ್ರಾರಂಭದ ದಿನಗಳಿಂದ ಪ್ರಕರಣಗಳ ಬೆನ್ನು ಹತ್ತಿ ಹೋರಾಟ ಪ್ರತಿಭಟನೆ ಮಾಡಿದ ಸಂಘ, ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಸ್.ಐ.ಟಿ ಯು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕಾಲವಿಳಂಬ ಮಾಡದೇ ನಿರ್ದಿಷ್ಟ ಕಾಲಮಿತಿಯಲ್ಲಿ ತನಿಖೆ ನಡೆದು ಸತ್ಯವನ್ನು ಹೊರಗೆಳೆಯಬೇಕು. ಸಿ.ಬಿ.ಐ.ನ್ಯಾಯಾಲಯದ ತೀರ್ಪು ಸೂಚಿಸಿರುವಂತೆ ಸೌಜನ್ಯ ಪ್ರಕರಣದಲ್ಲಿ ಪ್ರಾಥಮಿಕ ಹಂತದಲ್ಲಿ ತನಿಖೆಯ ದಾರಿ ತಪ್ಪಿಸಲು, ಸಾಕ್ಷಿ ನಾಶ ಮಾಡಿದ ತನಿಖಾಧಿಕಾರಿಗಳನ್ನು ತೀವ್ರ ತನಿಖೆಗೆ ಒಳಪಡಿಸಬೇಕು.

Advertisements

ಇದನ್ನೂ ಓದಿ: ಉತ್ತರ ಕನ್ನಡ | ಭಾರೀ ಮಳೆ ಮುನ್ಸೂಚನೆ; ಎಚ್ಚರ ವಹಿಸುವಂತೆ ಡಿಸಿ ಸೂಚನೆ

ನ್ಯಾಯದ ಪರ ನಿಂತು ಸತ್ಯವನ್ನು ಹೊರಗೆಳೆದು ನಿಜವಾದ ಆರೋಪಿಗಳನ್ನು ಮತ್ತು ಅವರ ರಕ್ಷಣೆಗೆ ನಿಂತವರನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ, ರಾಜ್ಯ ಉಪಾಧ್ಯಕ್ಷ ಪೃಥ್ವಿ ಎಂ.ಜಿ. ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X