ದ.ಕ. ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಪ್ರದೇಶದ ಹಲವೆಡೆ ರವಿವಾರ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ನಗರದಲ್ಲಿ ದಿನವಿಡೀ ಮೋಡ ಕವಿದ ವಾತಾವರಣವಿತ್ತು. ಜಿಲ್ಲೆಯ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಇದರಿಂದ ಜು.21 ಮತ್ತು 22 ರಂದು ಜಿಲ್ಲೆಯಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ: ಶಕ್ತಿ ಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು
ಅರಬ್ಬಿ ಸಮುದ್ರದಲ್ಲಿ ಗಾಳಿಯ ಪ್ರಮಾಣ ಗಂಟೆಗೆ 45ಕಿ.ಮೀ ನಿಂದ 47ಕಿ.ಮೀ ವರೆಗೆ ಹೆಚ್ಚಳವಾಗಿದೆ. ಹಾಗಾಗಿ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ದ.ಕ ಜಿಲ್ಲೆಯಲ್ಲಿ ರವಿವಾರ ಗರಿಷ್ಠ 30.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.