ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ: ಹಲವು ವಿಷಯಗಳ ಚರ್ಚೆಗೆ ವಿಪಕ್ಷಗಳು ಸಜ್ಜು

Date:

Advertisements

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. ಈ ಅಧಿವೇಶನವು ಆಗಸ್ಟ್​ 12ಕ್ಕೆ ಪೂರ್ಣಗೊಳ್ಳಲಿದೆ. ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ್, ಡೊನಾಲ್ಡ್​ ಟ್ರಂಪ್, ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಲಿದೆ.

ಅಧಿವೇಶನ ಆರಂಭವಾಗುವ ಮುನ್ನ ಭಾನುವಾರ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ, ಆಪರೇಷನ್ ಸಿಂಧೂರ್ ಮತ್ತು ಟ್ರಂಪ್ ಹೇಳಿಕೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಉತ್ತರಿಸಬೇಕೆಂದು ವಿರೋಧ ಪಕ್ಷಗಳು ಸರ್ಕಾರವನ್ನು ಒತ್ತಾಯಿಸಿದವು.

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ನಿಯಮಗಳ ಪ್ರಕಾರ ಆಪರೇಷನ್ ಸಿಂಧೂರ್ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು. ವಿದೇಶ ಪ್ರವಾಸಗಳನ್ನು ಹೊರತುಪಡಿಸಿ, ಅಧಿವೇಶನದ ಸಮಯದಲ್ಲಿ ಪ್ರಧಾನಿ ಯಾವಾಗಲೂ ಸಂಸತ್ತಿನಲ್ಲಿರುತ್ತಾರೆ ಎಂದು ರಿಜಿಜು ತಿಳಿಸಿದ್ದಾರೆ. ಅಧಿವೇಶನ ನಡೆಯುತ್ತಿರುವಾಗ, ಕೇಂದ್ರ ಸಚಿವರು ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಲು ಲಭ್ಯವಿರುತ್ತಾರೆ ಎಂದರು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

ಸಂಸತ್ತಿನ ಮಳೆಗಾಲದ ಅಧಿವೇಶನಕ್ಕೂ ಮುನ್ನ ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್, ಕೇಂದ್ರ ಸಚಿವ ಕಿರಣ್ ರಿಜಿಜು, ಕೇಂದ್ರ ಸಚಿವ ಜೆಪಿ ನಡ್ಡಾ ಮತ್ತು ಇತರ ಹಲವು ಪಕ್ಷಗಳ ನಾಯಕರು ಸೇರಿದಂತೆ 54 ಮಂದಿ ಭಾಗವಹಿಸಿದ್ದರು. ಬಾಕಿ ಇರುವ 9 ಮಸೂದೆಗಳನ್ನು ಮಂಡಿಸುವ ಸಾಧ್ಯತೆ ಇದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಸಂಸತ್ತಿನ ಸುಗಮ ಕಾರ್ಯನಿರ್ವಹಣೆಗೆ ಸರ್ಕಾರ ವಿರೋಧ ಪಕ್ಷದ ಸಹಕಾರವನ್ನು ಕೋರಿದೆ. ಆಪರೇಷನ್ ಸಿಂಧೂರ್ ಸೇರಿದಂತೆ ಯಾವುದೇ ವಿಷಯದ ಬಗ್ಗೆ ಚರ್ಚಿಸುವುದರಿಂದ ನಾವು ಓಡಿಹೋಗುತ್ತಿಲ್ಲ.ಈ ಎಲ್ಲ ವಿಷಯಗಳು ದೇಶಕ್ಕೆ ಬಹಳ ಮುಖ್ಯ. ಆದರೆ ಯಾವುದೇ ಚರ್ಚೆಯು ನಿಯಮಗಳ ವ್ಯಾಪ್ತಿಯಲ್ಲಿರುತ್ತದೆ ಎಂದು ರಿಜಿಜು ಹೇಳಿದ್ದಾರೆ.

ಸದನದಲ್ಲಿ ಪಹಲ್ಗಾಮ್ ಮತ್ತು ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ನೀಡಿದ ಹೇಳಿಕೆ,ಭಾರತ-ಪಾಕಿಸ್ತಾನದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಇತ್ತೀಚಿನ ಹೇಳಿಕೆ,ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ,ಈಶಾನ್ಯ ರಾಜ್ಯ ಮಣಿಪುರದ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಬೇಕೆಂದು ವಿಪಕ್ಷಗಳು ಒತ್ತಾಯಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X