ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಪುರ ಗ್ರಾಮ ಪಂಚಾಯಿತಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸಿದ್ದ ಬಿ. ಎಸ್ ಶುಭಲಕ್ಷ್ಮಿ ಅವರನ್ನು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್ ಕೀರ್ತನಾ ಅಮಾನತುಗೊಳಿಸಿದ್ದಾರೆ.
ಕುಂಕಾನಾಡು ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶುಭಲಕ್ಷ್ಮಿ ಅವರು, ಪುರ ಗ್ರಾ.ಪಂ. ವರ್ಗ-1ರ ಖಾತೆಯಲ್ಲಿನ ಹಣವನ್ನು ಕಾನೂನು ಬಾಹಿರವಾಗಿ ವ್ಯಯಮಾಡಿದ್ದಾರೆ ಎಂದು ಕುಂಕನಾಡು ಆರ್.ಮಂಜುನಾಥ್ ಎಂಬುವರು ನೀಡಿದ ದೂರಿನ ಅನ್ವಯ ತನಿಖೆ ನಡೆಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಖಾಸಗಿ ಬಸ್ ಪಲ್ಟಿ: 25ಕ್ಕಿಂತ ಹೆಚ್ಚು ಜನರಿಗೆ ಗಾಯ; ಇಬ್ಬರಿಗೆ ಗಂಭೀರ
2023-24ನೇ ಸಾಲಿನಲ್ಲಿ ವರ್ಗ-1ರಲ್ಲಿ ನೀರು, ಗಂಟಿಗಳಿಗೆ ನಿಯಮ ಬಾಹಿರವಾಗಿ ಚೆಕ್ ಮೂಲಕ ₹4.62 ಲಕ್ಷ ಹಣ ಪಾವತಿಸಿದ್ದಲ್ಲದೇ, ಚುನಾವಣಾ ವೆಚ್ಚದ ಹಣವನ್ನು ಪಾವತಿಸಿ ಹಣಸಂದ ರಶೀದಿಗೆ ಸಹಿ ಪಡೆದಿರಲಿಲ್ಲ. ಖರೀದಿ ಪುಸ್ತಕ, ಸಾಮಗ್ರಿಗಳ ದಾಸ್ತಾನು ಮತ್ತು ವಿತರಣಾ ವಹಿಯನ್ನು ಸಮರ್ಪಕವಾಗಿ ನಿರ್ವಹಿಸದೇ, ಕರ್ತವ್ಯ ಲೋಪವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಅವರ ವಿರುದ್ಧ ಕ್ರಮ ಜರುಗಿಸಲು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜಿಲ್ಲಾ ಪಂಚಾಯಿತಿ ಸಿಇಒಗೆ ವರದಿ ಸಲ್ಲಿಸಿದ್ದರು. ತನಿಖಾ ನಡೆದ ಬಳಿಕ ಸೇವೆಯಿಂದ ಅಮಾನತು ಮಾಡಲಾಗಿದೆ.