ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ(ಕ್ರೈಮ್ ವಿಭಾಗ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಉತ್ತರ ಕನ್ನಡ ಜಿಲ್ಲೆ ನಿವಾಸಿ ಕೀರಪ್ಪ (54) ಅವರು ಬಾಡಿಗೆ ಮನೆಯಲ್ಲಿ ಭಾನುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿರಸಿ ಪೊಲೀಸ್ ಠಾಣೆಯಿಂದ 5 ತಿಂಗಳ ಹಿಂದೆ ಭಡ್ತಿ ಹೊಂದಿ ಬಂಟ್ವಾಳಕ್ಕೆ ವರ್ಗಾವಣೆಗೊಂಡಿದ್ದರು. ಅವರ ಕುಟುಂಬದ ಸದಸ್ಯರು ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಸವಿದ್ದು, ಕೀರಪ್ಪ ಅವರು ಬಂಟ್ವಾಳದಲ್ಲಿ ಬಾಡಿಗೆ ಮನೆಯಲ್ಲಿದ್ದರು.
ಇದನ್ನೂ ಓದಿ: ಶಕ್ತಿ ಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು
ಭಾನುವಾರ ಕರ್ತವ್ಯಕ್ಕೆ ಹಾಜರಾಗದೆ, ಫೋನ್ ಕರೆಯನ್ನೂ ಸ್ವೀಕರಿಸದ ಕಾರಣ ಸಂಶಯಗೊಂಡ ಪೊಲೀಸರು ಮನೆಗೆ ತೆರಳಿ ನೋಡಿದ ವೇಳೆ ಕೋಣೆಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅವರ ಶವ ಕಂಡು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.