ಹಾವೇರಿ | ಮಕ್ಕಳಲ್ಲಿ ಹೆಚ್ಚುತ್ತಿರುವ ದೃಷ್ಟಿದೋಷ

Date:

Advertisements

ಹದಿಹರೆಯದ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ದೃಷ್ಟಿದೋಷ ಕಾಣಿಸಿಕೊಳ್ಳುತ್ತಿದೆ. ಹಾವೇರಿ ಜಿಲ್ಲಾಡಳಿತವು ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಕಣ್ಣಿನ ತಪಾಸಣೆಗೆ ಒಳಪಡಿಸಿದ್ದು, ಜಿಲ್ಲೆಯ 8,500 ವಿದ್ಯಾರ್ಥಿಗಳಲ್ಲಿ ದೃಷ್ಟಿದೋಷ ಇರುವುದು ಕಂಡುಬಂದಿದೆ.

ಜಿಲ್ಲೆಯಲ್ಲಿ ಹಲವು ವಿದ್ಯಾರ್ಥಿಗಳು ತಮಗೆ ಬೋರ್ಡ್‌ ಮೇಲೆ ಬರೆಯಲಾಗುತ್ತಿಲ್ಲ. ಹೆಚ್ಚು ಸಮಯ ಓದಲಾಗುತ್ತಿಲ್ಲವೆಂದು ಹೇಳಿಕೊಳ್ಳುತ್ತಿದ್ದ ಹಿನ್ನಲೆಯಲ್ಲಿ ಜಿಲ್ಲಾಡಳಿತವು ಜಿಲ್ಲೆಯ 1,796 ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೇತ್ರ ತಪಾಸಣೆ ನಡೆಸಿದೆ.

ತಪಾಸಣೆಗೆ ಒಳಗಾದ ವಿದ್ಯಾರ್ಥಿಗಳ ಪೈಕಿ 8,500 ವಿದ್ಯಾರ್ಥಿಗಳಲ್ಲಿ ದೃಷ್ಟಿದೋಷ ಕಂಡುಬಂದಿದೆ. ಕಳೆದ ವರ್ಷ( 2022-23ರ ಶೈಕ್ಷಣಿಕ ಸಾಲು) 4,367 ಮಕ್ಕಳಲ್ಲಿ ದೃಷ್ಟಿದೋಷ ಕಾಣಿಸಿಕೊಂಡಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ದೃಷ್ಟಿದೋಷ ಇರುವ ವಿದ್ಯಾರ್ಥಿಗಳ ಸಂಖ್ಯೆ ದ್ವಿಗುಣಗೊಂಡಿದೆ.

Advertisements

ಅತಿಯಾದ ಮೊಬೈಲ್‌ ಬಳಕೆ, ಆನ್‌ಲೈನ್‌ ತರಗತಿಗಳು ಹಾಗೂ ಸ್ಮಾರ್ಟ್‌ ನೋಟ್‌ಗಳ ಬಳಕೆಯು ವಿದ್ಯಾರ್ಥಿಗಳಲ್ಲಿ ದೃಷ್ಟಿದೋಷಕ್ಕೆ ಕಾರಣವಾಗಿರಬಹುದು ಎಂದು ಊಹಿಸಲಾಗಿದೆ. ಅಲ್ಲದೆ, ಅಗತ್ಯ ಪೌಷ್ಟಿಕಾಂಶದ ಕೊರತೆಯೂ ಕಾರಣವೆಂದು ಹೇಳಲಾಗುತ್ತಿದೆ. ಆದರೆ, ಸಮಸ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

Download Eedina App Android / iOS

X