ಬೀದರ್ ಜಿಲ್ಲೆಯ ಔರಾದ್‌ನ ಬಿಜೆಪಿ ಶಾಸಕ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ್ ಚವ್ಹಾಣ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬರು ಪ್ರತೀಕ್ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ, ಇದೀನ ಶಾಸಕ ಪ್ರಭು ಚವ್ಹಾಣ ಅವರ ಸಂಬಂಧಿಕರೊಬ್ಬರು ಯುವತಿಯ ಕುಟುಂಬದ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ʼಪ್ರಭು ಚವಾಣ್ ಅವರ ಮಗ ಪ್ರತೀಕ್ ಚವಾಣ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಾರಾಷ್ಟ್ರದ ಯುವತಿಯೊಬ್ಬರು ಮಹಿಳಾ ಪೊಲೀಸ್ ಠಾಣೆಗೆ ಭಾನುವಾರ ದೂರು ಕೊಟ್ಟಿದ್ದರು. ಈಗ ಆ ಯುವತಿಯ ಪೋಷಕರು, ಸಹೋದರ ಸೇರಿದಂತೆ ಎಂಟು ಜನರ ವಿರುದ್ಧ ಶಾಸಕರ ಸಂಬಂಧಿ ಮುರಳಿಧರ ಪ್ರಕಾಶ್ ಪವಾರ್ ಎಂಬುವರು ದೂರು ಕೊಟ್ಟಿದ್ದಾರೆ.
ಈ ಎಂಟು ಜನರ ಜತೆಗೆ ಇತರೆ 30ಕ್ಕೂ ಹೆಚ್ಚು ಜನರ ತಂಡ ಇದೇ ಜುಲೈ 5ರಂದು ರಾತ್ರಿ 8.30ರ ಸುಮಾರಿಗೆ ಅಕ್ರಮವಾಗಿ ಮನೆಗೆ ನುಗ್ಗಿ ಕಲ್ಲು, ಕಟ್ಟಿಗೆ ಹಾಗೂ ಇತರೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಶಾಸಕರು ತಪ್ಪಿಸಿಕೊಂಡಿದ್ದು, ನನಗೆ ಬೆನ್ನು ಹಾಗೂ ಟೊಂಕದ ಮೇಲೆ ಗಾಯಗಳಾಗಿವೆ. ಘಟನೆಯಲ್ಲಿ ಶಾಸಕರ ಪುತ್ರ ಪ್ರತೀಕ್ ಚವಾಣ್ ಹಾಗೂ ಅಮಿತ್ ರಾಠೋಡ್ ಅವರಿಗೂ ಗಾಯವಾಗಿದೆ. ಮನೆಯಲ್ಲಿದ್ದ ಮಹಿಳೆಯರನ್ನು ಬಿಡದೆ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ಘಟನೆಗೆ ಮುಖಂಡ ದೀಪಕ್ ಪಾಟೀಲ್ ಚಾಂದೋರಿ ಅವರ ಕುಮ್ಮಕು ಕಾರಣʼ ಎಂದು ದೂರಿನಲ್ಲಿ ತಿಳಿಸಿದ್ದಾರೆ.