ಉಡುಪಿ | ಗೃಹ ಅರೋಗ್ಯ ಯೋಜನೆಯ ಮೂಲಕ ಜನಸಾಮಾನ್ಯರ ಮನೆ ಬಾಗಿಲಿಗೆ ಅರೋಗ್ಯ ಸೇವೆ – ದಿನಕರ ಹೇರೂರು

Date:

Advertisements

ರಾಜ್ಯ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹ ಅರೋಗ್ಯ ಯೋಜನೆಯ ಮೂಲಕ ಜನಸಾಮಾನ್ಯರ ಮನೆ ಬಾಗಿಲಿಗೆ ಅರೋಗ್ಯ ಸೇವೆಯನ್ನು ತಲುಪಿಸಿ, ಅಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಮರಣ ಪ್ರಮಾಣವನ್ನು
ಕಡಿಮೆ ಮಾಡುವ ಗುರಿ ಹೊಂದಲಾಗಿದೆ ಎಂದು ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಗೃಹ ಆರೋಗ್ಯ ಯೋಜನೆಯ ಕಾರ್ಯಾಗಾರ ಉದ್ಘಾಟಿಸಿ, ಆಶಾ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು.

ಗೃಹ ಅರೋಗ್ಯ ಯೋಜನೆ ಕಾರ್ಯಕ್ರಮದಡಿ ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೂ ಭೇಟಿ ನೀಡಿ 30 ವರ್ಷ ಮೇಲ್ಪಟ್ಟವರಲ್ಲಿ ಸಕ್ಕರೆ ಕಾಯಿಲೆ, ರಕ್ತದೊತ್ತಡ, ವಿವಿಧ ತರಹದ ಕ್ಯಾನ್ಸರ್, ಮಾನಸಿಕ ಆರೋಗ್ಯ ಸೇರಿದಂತೆ ಮತ್ತಿತರ ರೋಗ ಲಕ್ಷಣವಿರುವವರನ್ನು ಸ್ಕಾನಿಂಗ್ ಮಾಡಿ, ಅರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಚಿಕಿತ್ಸೆಗೆ ಒಳಪಡಿಸುತ್ತಾರೆ. ಹೆಚ್ಚಿನ ಚಿಕಿತ್ಸೆಗೆ ರೆಫರಲ್ ಸಹ ನೀಡಲಿದ್ದಾರೆ ಎಂದರು. ಸಾರ್ವಜನಿಕರ ಅರೋಗ್ಯಕ್ಕೆ ವಿಶೇಷವಾದ ಒತ್ತನ್ನು ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ಅದರಲ್ಲಿ ಗೃಹ ಆರೋಗ್ಯ ಯೋಜನೆಯೂ ಒಂದಾಗಿದೆ. ಸಮಾಜದ ಸ್ವಾಸ್ಥ ಕಾಪಾಡುವಲ್ಲಿ ಬಹುಮುಖ್ಯ
ಸೇವೆ ಒದಗಿಸುತ್ತಿರುವ ಆರೋಗ್ಯ ಇಲಾಖೆಯು ಮುತುವರ್ಜಿ ವಹಿಸಿ, ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ನಮ್ಮ ಆರೋಗ್ಯ ನಮ್ಮ ಆದ್ಯತೆಯಾಗಬೇಕು. ಹಿಂದಿನ ದಿನಗಳಿಗೆ ಹೋಲಿಸಿದಾಗ ಇತ್ತೀಚಿನ ಆಹಾರಪದ್ದತಿ, ಒತ್ತಡದ ಜೀವನಶೈಲಿಯಿಂದಾಗಿ ಅರೋಗ್ಯ ಸಮಸ್ಯೆಗಳು ಕಂಡುಬರುತ್ತಿವೆ. ಕೆಲವರಿಗೆ ತಮಗಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವೇ ಇರುವುದಿಲ್ಲ. ಇಂತಹ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರನ್ನು ಅವರಿರುವೆಡೆಯಲ್ಲಿ ಗುರುತಿಸಿ, ಸೂಕ್ತ ಚಿಕಿತ್ಸೆ ನೀಡಲು ಗೃಹ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದ ಅವರು, ಕಾಯಿಲೆಗಳು ಬಂದ ನಂತರ ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಎಚ್ಚರವಹಿಸಬೇಕು ಎಂದರು.

Advertisements
ಗೃಹ ಅರೋಗ್ಯ ಯೋಜನೆ 1

ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಜೀವನ ಶೈಲಿ ಬದಲಾವಣೆಯಿಂದ ಅನೇಕ ರೋಗಗಳಿಗೆ ಇಂದಿನ ನಾಗರಿಕರು ತುತ್ತಾಗುತ್ತಿದ್ದಾರೆ. ಗ್ರಾಮೀಣ ಭಾಗದವರು, ಬಡಜನರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದು ಮನಗಂಡ ಸರ್ಕಾರ ಅವರುಗಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಗೃಹ ಅರೋಗ್ಯ ಯೋಜನೆ ಜಾರಿಗೊಳಿಸಿ ಮನೆ ಮನೆಗೂ ಆರೋಗ್ಯ ಸೇವೆ ಒದಗಿಸುತ್ತಿದೆ. ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಹೊಂದಬೇಕು ಎಂದ ಅವರು, .ಕಾರ್ಯಕ್ರಮ ಅನುಷ್ಟಾನಕ್ಕೆ ಸಂಬಂಧಿಸಿದಂತೆ ನಗರಸಭೆಯ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಜಿ ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿದರೆ, ಹಿರಿಯ ಅರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X