ತುಮಕೂರು ಜಿಲ್ಲೆಯಲ್ಲಿ ಮುಂದಿನ 7 ದಿನ ಭಾರಿ ಮಳೆ : ಎಚ್ಚರದಿಂದಿರಲು ಜಿಲ್ಲಾಧಿಕಾರಿ ಮನವಿ

Date:

Advertisements

 ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ 7 ದಿನಗಳಲ್ಲಿ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರಿ ಪ್ರಮಾಣದಲ್ಲಿ ಗಾಳಿ-ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತೆವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಶುಭ ಕಲ್ಯಾಣ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.   

 ರಾಜ್ಯದಿಂದ ಸಿಡಿಲು ಬಡಿಯುವ ಪ್ರದೇಶದ ಸಾರ್ವಜನಿಕರಿಗೆ ಮುಂಚಿತವಾಗಿ ರವಾನಿಸುವ SಒS ಂಟeಡಿಣ ನಂತೆ ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚು ಎಚ್ಚರದಿಂದಿರಬೇಕು. ಕೃಷಿ ಕೆಲಸ, ಜಾನುವಾರು ಮೇಯಿಸಲು ಹೋಗಬಾರದು. ಲೋಹದ ತಗಡು ಹೊಂದಿರುವ ಮನೆ, ಮರ, ವಿದ್ಯುತ್ ಉಪಕರಣ, ಸರಬರಾಜು ಮಾರ್ಗ, ಕಂಬ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಜಲಕಾಯಗಳು ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಕಬ್ಬಿಣದ ಸರಳುಗಳ ಛತ್ರಿ, ಮೊಬೈಲ್ ಫೋನ್ ಬಳಸಬಾರದು.

 ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದಂತೆ ಜನ ಸಂದಣಿಯಾಗದಂತೆ ಅಂತರ ಕಾಪಾಡಿಕೊಳ್ಳಬೇಕು. ತುರ್ತು ಚಿಕಿತ್ಸೆಗೆ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕು. ನದಿ, ಹಳ್ಳ, ಕೆರೆ ದಡ, ಅಪಾಯಕಾರಿಯಾಗಿ ಹರಿಯುವ ನೀರಿನಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ತೊಳೆಯುವುದು, ಪೋಟೋ, ಸೆಲ್ಫಿಗಳನ್ನು ತೆಗೆಯುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆಗಳು ನಡೆಸದಂತೆ ಎಚ್ಚರವಹಿಸಬೇಕು. ಪೋಷಕರು ತಮ್ಮ ಮಕ್ಕಳನ್ನು ಅಪಾಯಕಾರಿಯಾಗಿ ಹರಿಯುವ ನೀರು ಮತ್ತು ಕೆರೆ, ಕಟ್ಟೆಗಳಲ್ಲಿ ಈಜಲು ಬಿಡದಂತೆ ಜಾಗೃತಿವಹಿಸಬೇಕು. ದುರ್ಬಲ ಮಣ್ಣಿನ ಮನೆ, ಕಟ್ಟಡಗಳು, ದುರ್ಬಲ ಮರದ ಕೊಂಬೆಗಳು, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರಬೇಕು.

Advertisements

 ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿರಿಸಬೇಕು. ತೋಟಗಾರಿಕೆ ಬೆಳೆಗಳನ್ನು ಮಳೆಗೆ ಹಾನಿಯಾಗದಂತೆ ಸೂಕ್ತ ರೀತಿಯಲ್ಲಿ ಸಂರಕ್ಷಿಸಿಕೊಳ್ಳಬೇಕು. 

ಕೆರೆ-ಕಟ್ಟೆಗಳ ಏರಿ, ಬಂಡ್, ಕೋಡಿಗಳಲ್ಲಿ ನೀರು ಸೋರಿಕೆ ಕಂಡುಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ, ನಿಂತಿದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್, ಕಂಬ ಬಿದ್ದಿದ್ದಲ್ಲಿ, ಮನೆಯೊಳಗೆ ಮಳೆ ನೀರು ನುಗ್ಗಿದಲ್ಲಿ, ಮನೆ ಗೋಡೆ, ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟವಾಗಿದ್ದಲ್ಲಿ ಇತರೆ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಸಹಾಯವಾಣಿ: 7304975519, 0816-2213400 / 155304, ಬೆಸ್ಕಾಂ 1912, ವಾಟ್ಸ್ಆಪ್ 8277884019ನ್ನು ಸಂಪರ್ಕಿಸಿ ದೂರು ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X