ಬೆಳಗಾವಿ ನಗರದ ಬಸವೇಶ್ವರ ವೃತ್ತದ ಕ್ಯಾಟರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮಹಿಳೆ ಸಾವಿಗೀಡಾದ ಘಟನೆ ನಡೆದಿದೆ.
ಅನಗೋಳದ ಬಾಬಲೆ ಗಲ್ಲಿಯ ನಿವಾಸಿ ಶೀಬಾ ವಾಸೀಮ್ ಇನಾಮದಾರ (30) ಮೃತಪಟ್ಟವರು. ಅವರು ಶಾಲೆಯಿಂದ ತಮ್ಮ ಇಬ್ಬರು ಮಕ್ಕಳನ್ನು ಕರೆದುಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಮಿನಿ ಕ್ಯಾಂಟರ್ ವಾಹನವು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಯಿಂದ ಶೀಬಾ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅವರೊಂದಿಗಿದ್ದ ಮಕ್ಕಳ ಪೈಕಿ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ಮಗುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಸ್ಥಳಕ್ಕೆ ಧಾವಿಸಿದ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಪ್ರಕರಣ ದಾಖಲಾಗಿದೆ.