ಹೊಸ ಬಿಪಿಎಲ್‌, ಎಪಿಎಲ್‌ ಕಾರ್ಡ್​ ವಿತರಣೆಗೆ ಸೂಚನೆ: ಆಹಾರ ಸಚಿವ ಕೆ.ಎಚ್ ಮುನಿಯಪ್ಪ

Date:

Advertisements
  • ‘ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು’
  • ಪಡಿತರ ಕಾರ್ಡ್​ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ

ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಹೊಸದಾಗಿ ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು. ನೀತಿ ಸಂಹಿತೆ ಜಾರಿಯಾಗಿದ್ದ ಹಿನ್ನೆಲೆ ರೇಷನ್​​ ಕಾರ್ಡ್​ ವಿತರಣೆ ಸ್ಥಗಿತ ಮಾಡಲಾಗಿತ್ತು. ಈಗ ಹೊಸ ಪಡಿತರ ಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಹೊಸ ಪಡಿತರ ಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪಡಿತರ ಕಾರ್ಡ್​ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಕಾರ್ಡ್​ನಲ್ಲಿರುವ ಮೃತರ ಹೆಸರನ್ನು ತೆರವುಗೊಳಿಸಲು ಸೂಚಿಸಲಾಗಿದೆ” ಎಂದು ಹೇಳಿದರು.

556 ಕೋಟಿ ರೂ. ಹಣ ಹಂಚಿಕೆ

Advertisements

“ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕು ಅಂತ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರವಾಗಿ ನಗದು ವರ್ಗಾವಣೆ ಆಗಲಿದೆ. ಈವರೆಗೆ ಒಂದು ಕೋಟಿಗೂ ಹೆಚ್ಚು ಕುಟುಂಬಗಳಿಗೆ ಸುಮಾರು 556 ಕೋಟಿ ರೂ. ಹಣ ಹಾಕಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲ ಆಗಿದೆ” ಎಂದರು.

ಬಜೆಟ್‌ನಲ್ಲಿ 10 ಸಾವಿರ ಕೋಟಿ ರೂ. ಹಣ ನಿಗದಿ

ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗದ ಹಿನ್ನೆಲೆಯಲ್ಲಿ 5 ಕೆಜಿ ಅಕ್ಕಿ ಬದಲಾಗಿ ಪ್ರತಿ ಫಲಾನುಭವಿಗಳಿಗೆ 170 ರೂಪಾಯಿ ಹಣ ನೀಡಲಾಗುತ್ತದೆ. ಇದರಿಂದ 44.80 ಲಕ್ಷ ಅಂತ್ಯೋದಯ ಹಾಗೂ 3.97 ಕೋಟಿ ಬಿಪಿಎಲ್‌ ಪಡಿತರ ಚೀಟಿದಾರರಿಗೆ ಪ್ರಯೋಜನ ಆಗಲಿದೆ. ಡಿಬಿಟಿ ಮೂಲಕ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಲಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ಪ್ರಸ್ತುತ ಬಜೆಟ್‌ನಲ್ಲಿ 10 ಸಾವಿರ ಕೋಟಿ ರೂ. ಹಣ ನಿಗದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ವರ್ಗಾವಣೆ ದಂಧೆ, ಪೊಲೀಸ್‌ ಅಧಿಕಾರಿಗಳ ನಡೆ ಬಗ್ಗೆ ಬಿ ಸಿ ನಾಗೇಶ್‌, ಶ್ರೀನಿವಾಸ ಪೂಜಾರಿ ಆಕ್ರೋಶ

ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರ ಅಕ್ಕಿ ನೀಡಲು ಮುಂದೆ ಬಂದಿವೆ. ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡುತ್ತೇವೆ. 34 ರೂ.ಗೆ ಅಕ್ಕಿ ಕೊಡುತ್ತೇವೆ ಅಂದರೆ ನಾವು ತೆಗೆದುಕೊಳ್ಳಲು ಸಿದ್ದರಿದ್ದೇವೆ. ಒಂದು ವಾರದಲ್ಲಿ ಅಲ್ಲಿನ ಅಧಿಕಾರಿಗಳು ನಿರ್ಧಾರ ಪ್ರಕಟಿಸುವ ವಿಶ್ವಾಸವಿದೆ. ಸೆಪ್ಟೆಂಬರ್​ ತಿಂಗಳಿನಲ್ಲಿ ಹಣದ ಬದಲು 10 ಕೆಜಿ ಅಕ್ಕಿ ವಿತರಿಸುವ ಚಿಂತನೆ ಇದೆ ಎಂದು ವಿವರಿಸಿದರು.

ವೈಟ್​ಬೋರ್ಡ್​ ಕಾರು ಇದ್ದವರಿಗೆ ಬಿಪಿಎಲ್​ ​​ಕಾರ್ಡ್​ ಇಲ್ಲ

ವೈಟ್​ಬೋರ್ಡ್​ ಕಾರು ಹೊಂದಿರುವವರಿಗೆ ಬಿಪಿಎಲ್​ ​​ಕಾರ್ಡ್​ ಇಲ್ಲ. ಹಳದಿ ಬೋರ್ಡ್ ಕಾರು ಇದ್ದರೆ ಬಿಪಿಎಲ್‌ ಕಾರ್ಡ್ ವಿತರಿಸಲಾಗುವುದು. ಈ ಬಗ್ಗೆ ಚರ್ಚೆ ಮಾಡಿ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.

22 ಲಕ್ಷ ಬಿಪಿಎಲ್‌ ಕುಟುಂಬಕ್ಕೆ ಹಣ ತತ್‌ಕ್ಷಣ ಸಿಗಲ್ಲ

ಕರ್ನಾಟಕದಲ್ಲಿ 22 ಲಕ್ಷ ಬಿಪಿಎಲ್‌ ಕುಟುಂಬಗಳು ಬ್ಯಾಂಕ್‌ ಖಾತೆಗಳನ್ನು ಹೊಂದಿಲ್ಲ. ಹೀಗಾಗಿ ಅವರಿಗೆ ಈ ಹಣವನ್ನು ನೇರವಾಗಿ ಅವರ ಖಾತೆಗೆ ಜಮೆ ಮಾಡುವುದಕ್ಕೆ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X