ಉತ್ತರ ಕನ್ನಡ | ಅಪಾಯಕಾರಿ ಮರಗಳ ತೆರವಿಗೆ ಶಾಸಕ ಸತೀಶ್ ಸೈಲ್ ಸೂಚನೆ

Date:

Advertisements

ಕಾರವಾರ ನಗರಸಭಾ ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳನ್ನು ಒಂದು ವಾರದೊಳಗೆ ಸಂಪೂರ್ಣವಾಗಿ ತೆರವುಗೊಳಿಸುವಂತೆ ಅರಣ್ಯ ಇಲಾಖೆ, ಕಂದಾಯ ಇಲಾಖೆ, ಹೆಸ್ಕಾಂ ಮತ್ತು ನಗರಸಭೆ ಅಧಿಕಾರಿಗಳಿಗೆ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಸೂಚನೆ ನೀಡಿದರು.

ಅವರು ಸೋಮವಾರ ನಗರಸಭೆ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
“ಭಾನುವಾರ ಕಾರವಾರ ನಗರಸಭಾ ವ್ಯಾಪ್ತಿಯಲ್ಲಿ ಮರ ಬಿದ್ದು ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ದುಃಖ ವ್ಯಕ್ತಪಡಿಸಿದ ಅವರು ಅಪಾಯಕಾರಿ ಮರಗಳ ತೆರವು ಕುರಿತಂತೆ ಎಚ್ಚರಿಕೆ ನೀಡುತ್ತಲೇ ಇದ್ದರೂ ಯಾರು ಕೂಡ ಅದರ ಬಗ್ಗೆ ನಿಗಾ ವಹಿಸಿರುವುದಿಲ್ಲ. ನಿನ್ನೆ ಆದ ಘಟನೆ ಬಗ್ಗೆ ಅಧಿಕಾರಿಗಳ ವಿರುದ್ದ ಬೇಸರ ವ್ಯಕ್ತಪಡಿಸಿದ ಅವರು, ಇಂದಿನಿಂದ ಒಂದು ವಾರದ ಒಳಗೆ ಕಾರವಾರ ನಗರಸಭಾ ವ್ಯಾಪ್ತಿಯಲ್ಲಿ ಗುರುತಿಸಿರುವ ಅಪಾಯಕಾರಿ ಮರಗಳನ್ನು ತಕ್ಷಣದಿಂದಲೇ ತೆರವುಗೊಳಿಸುವ ಕಾರ್ಯ ಆರಂಭಿಸುವಂತೆ” ಅಧಿಕಾರಿಗಳಿಗೆ ಸೂಚನೆ ನೀಡಿದರು.

“ಕಾರವಾರ ನಗರಸಭಾ ವ್ಯಾಪ್ತಿಯಲ್ಲಿ ಈಗಾಗಲೇ 12 ರಿಂದ 18 ಅಪಾಯಕಾರಿಗಳ ಮರಗಳನ್ನು ಗುರುತಿಸಿದ್ದು, ಈ ಮರಗಳನ್ನು ತೆರವುಗೊಳಿಸುವುದು ಮಾತ್ರವಲ್ಲದೇ ಸಾರ್ವಜನಿಕರಿಂದ ಬೇಡಿಕೆ ಬರುವ ಅಪಾಯಕಾರಿ ಮರಗಳನ್ನು ಸಹ ನಿಯಮಾನುಸಾರ ಪರಿಶೀಲಿಸಿ ತೆರವುಗಳಿಸಬೇಕು” ಎಂದು ಸೂಚಿಸಿದರು.

Advertisements
WhatsApp Image 2025 07 21 at 6.40.06 PM

“ಪ್ರಸ್ತುತ ತೆರವುಗೊಳಿಸುವ ಮರಗಳ ಬದಲಿಗೆ ಮುಂದಿನ ವಾರದಲ್ಲಿ 1:10 ಪ್ರಮಾಣದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಆರಂಭಿಸಬೇಕು. ಈ ಪ್ರಮಾಣ 1:20 ಕ್ಕೆ ಹೆಚ್ಚಿಸುವ ಕುರಿತಂತೆ ಎಲ್ಲಾ ಸ್ವಯಂ ಸೇವಾ ಸಂಘಟನೆಗಳು ಮತ್ತು ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು. ಒಂದು ವಾರದ ಅವಧಿಯಲ್ಲಿ ಮರಗಳನ್ನು ತೆರವು ಮಾಡುವ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿ, ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಗರಿಷ್ಠ ಭದ್ರತೆಯಲ್ಲಿ ಪೊಲೀಸ್‌ ಇಲಾಖೆ ಕಾರ್ಯನಿರ್ವಹಿಸಬೇಕು. ವಿದ್ಯುತ್ ಸಂಬಂಧಿತ ಸಮಸ್ಯೆ ಕಂಡು ಬರದಂತೆ ಹೆಸ್ಕಾಂ ಇಲಾಖೆಗೆ ಮತ್ತು ಸ್ಥಳದಲ್ಲಿ ಆಂಬುಲೆನ್ಸ್ ಸೇವೆ ಇರುವುದು ಸೇರಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಪೌರಾಯುಕ್ತರಿಗೆ ಸೂಚಿಸಿದರು.

“ನಗರಸಭಾ ವ್ಯಾಪ್ತಿಯ ಕೋಣೆನಾಲದ ಒತ್ತುವರಿಯನ್ನು ಕೂಡಲೇ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕೋಣೆನಾಲಕ್ಕೆ ಗೃಹ ಬಳಕೆಯ ನೀರು ಮತ್ತು ಶೌಚಾಲಯದ ತ್ಯಾಜ್ಯ ಬಿಡುವವರ ವಿರುದ್ದ ಕ್ರಮ ಕೈಗೊಂಡು ಅವರಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಕಡಿತಗೊಳಿಸಬೇಕು. ನಗರಸಭಾ ವ್ಯಾಪ್ತಿಯಲ್ಲಿ ಮರಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡಿರುವವರಿಗೆ ಅವರಿಗೆ ಎಲ್ಲಾ ಅಗತ್ಯ ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ 10 ಲಕ್ಷದ ವರೆಗಿನ ವಿಮಾ ಸೌಲಭ್ಯ ಒದಗಿಸುವಂತೆ” ನಗರಸಭೆಯ ಪೌರಾಯುಕ್ತರಿಗೆ ಸೂಚಿಸಿದರು.

ಇದನ್ನೂ ಓದಿ: ಉತ್ತರ ಕನ್ನಡ | ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವು

ಅಪಾಯಕಾರಿ ಮರಗಳ ತೆರವು ಕಾರ್ಯದ ಪ್ರಯುಕ್ತ ಸವಿತಾ ಹೋಟೆಲ್ ಬಳಿಯ ಅಪಾಯಕಾರಿಯಾಗಿದ್ದ ಮರವನ್ನು ಶಾಸಕರ ಸಮ್ಮುಖದಲ್ಲಿ ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮರಕ್ಕೆ ಪೂಜೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್, ಡಿಎಫ್‌ಓ ರವಿಶಂಕರ್, ತಹಸೀಲ್ದಾರ್ ನಿಶ್ಚಲ್ ನರೋನ್ಹ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲಾ ಹುಲಸ್ವಾರ್, ಕಾರವಾರ ನಗರ ಠಾಣೆಯ ಇನ್ಸ್ಪೆಕ್ಟರ್ ರಮೇಶ ಹೂಗಾರ್, ನಗಸಭೆಯ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X