ಕುಮಟಾ ತಾಲೂಕಿನ ಹಳಕಾರ ಗ್ರಾಮದ ಮಾವಿನಕೆರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಭವಿಸಿದೆ.
ಮೃತನನ್ನು ಹಳದಿಪುರ ಮೂಲದ ನಿವಾಸಿ ನಿಲೇಶ ನಾಯ್ಕ (27) ಎಂದು ಗುರುತಿಸಲಾಗಿದೆ. ನಾಲ್ಕು ಜನ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜುತ್ತಿರುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಈಜುತ್ತಿದ್ದ ಸಂದರ್ಭದಲ್ಲಿ ಕಾಲಿಗೆ ಸಿಕ್ಕಿಹಾಕಿಕೊಂಡ ಪಾಚಿಯನ್ನು ಬಿಡಿಸಿಕೊಳ್ಳಲು ಸಾಧ್ಯವಾಗದೆ ನಿಲೇಶ ಮುಳುಗಿ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕದಳ, ಪೋಲೀಸ್ ಇಲಾಖೆ ಹಾಗೂ ಸ್ಥಳೀಯರ ಸಹಾಯದಿಂದ ಶವವನ್ನು ಮೇಲಕ್ಕೆತ್ತಲಾಗಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕುಮಟಾ | ಎಕ್ಸ್‌ಪ್ರೆಸ್ ರೈಲಿನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು