ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಸವಾರ ರುದ್ರನಾಯ್ಕ (66) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಂಬಾರಗೊಪ್ಪ ಗ್ರಾಮದವರಾದ ರುದ್ರನಾಯ್ಕ ಅವರು ಗ್ರಾಮದಿಂದ ಶಿರಾಳಕೊಪ್ಪ-ಶಿಕಾರಿಪುರ ಮುಖ್ಯರಸ್ತೆ ದಾಟುವಾಗ ಈ ದುರ್ಘಟನೆ ನಡೆದಿದೆ.
ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.