ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ಹರಿಕಾರ, 371(ಜೆ)ನ ರೂವಾರಿ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬ ದಿನದ ನಿಮಿತ್ತ ಯಾದಗಿರಿ ಮತಕ್ಷೇತ್ರದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರ ಸುಪುತ್ರ ಪಂಪಣ್ಣಗೌಡ (ಸನ್ನಿಗೌಡ) ತುನ್ನೂರ ಅವರು ನೇತೃತ್ವದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಚೇರಿಯ ಎದುರು ರಾಷ್ಟ್ರೀಯ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬ್ಯಾನರ್ ಮುಂದೆ ಕೇಕ್ ಕಟ್ ಮಾಡುವುದರ ಮುಖಾಂತರ 83ನೇ ಆಚರಣೆ ಮಾಡಲಾಯಿತು.
ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ ಯುವ ಕಾಂಗ್ರೆಸ್ ಮುಖಂಡ ಸನ್ನಿಗೌಡ ತುನ್ನೂರ ಮಾತನಾಡಿ, “ರಕ್ತಹಿನತೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದೆ. ಅನಾರೋಗ್ಯದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ರೋಗಿಗಳಿಗೆ ರಕ್ತದಾನ ಮಾಡುವ ಮೂಲಕ ಅವರಿಗೆ ನೆರವು ನೀಡಿದರೆ ಅನುಕೂಲವಾಗುತ್ತದೆ” ಎಂದರು.
ಈ ಸುದ್ದಿ ಓದಿದ್ದೀರಾ? ಕಾರವಾರ | ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನೂತನ ಹಾಸ್ಟೆಲ್ ಉದ್ಘಾಟನೆ
“ನಾವು ರಕ್ತದಾನ ಮಾಡುವುದರಿಂದ ನಮ್ಮ ದೇಹದ ಆರೋಗ್ಯವೂ ಸುರಕ್ಷಿತವಾಗಿರುತ್ತದೆ ಹಾಗೂ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತೆದೆ. ನಮ್ಮ ದೇಹಕ್ಕೆ ನವ ಚೈತನ್ಯ ಬರುತ್ತದೆ. ಹೀಗಾಗಿ ಯಾರಿಗೂ ರಕ್ತದಾನ ಮಾಡಲು ಹಿಂಜರಿಕೆ ಬೇಡ” ಎಂದು ಹೇಳಿದರು.
ಕಾರ್ಯಕ್ರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಯುವ ಮುಖಂಡರು ಉಪಸ್ಥಿತರಿದ್ದರು.